ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಇಡಿಯ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದ್ದು, ಎರಡು ದಿನ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಪಾಲಿಕೆಯ ಅಕೌಂಟ್ ಸೆಕ್ಷನ್ ಅಧಿಕಾರಿಯೊಬ್ಬರು, ಕಂಟೈನ್ಮೆಂಟ್ ಝೋನ್ ನೋಡಲ್ ಅಧಿಕಾರಿಯಾಗಿಯೂ ಸಹ ಕಾರ್ಯನಿರ್ವಹಿಸುತ್ತಿದ್ದು, ಇವರಿಗೆ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಆವರಣದಲ್ಲಿರುವ ಎಲ್ಲ ಕಟ್ಟಡಗಳನ್ನು ಸ್ಯಾನಿಟೈನ್ ಮಾಡಲಾಗುತ್ತಿದ್ದು, ಸೀಲ್ ಡೌನ್ ಮಾಡಲಾಗಿದೆ. ಎರಡು ದಿನ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post