ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು ಬರೋಬ್ಬರಿ 126 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1143ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಒಬ್ಬರು ಮೃತಪಟ್ಟಿದ್ದರೆ, 39 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು, ಈವರೆಗೂ 276 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 49 ಆಗಿದೆ. ಇಂದು ಒಟ್ಟು 394 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 584 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 50 ಭದ್ರಾವತಿ: 19 ಶಿಕಾರಿಪುರ: 9 ಸೊರಬ: 7 ತೀರ್ಥಹಳ್ಳಿ: 3 ಸಾಗರ: 6 ಇತರೆ ಜಿಲ್ಲೆ: 3
Get In Touch With Us info@kalpa.news Whatsapp: 9481252093

















