ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಅಲಹಾಬಾದ್: ಅಯೋಧ್ಯೆ ರಾಮಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿವನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಾರಾಸಗಟಾಗಿ ವಜಾಗೊಳಿಸಿರುವ ಅಲಹಾಬಾದ್ ಹೈಕೋರ್ಟ್, ಈ ಅರ್ಜಿ ಪೂರ್ವಾಗ್ರಹ ಪೀಡತವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ದೆಹಲಿ ಮೂಲದ ವಕೀಲ ಸಾಕೇತ್ ಗೋಖಲೆ ಅವರು ಬುಧವಾರ ಸಲ್ಲಿಸಿದ್ದ ಮನವಿಯಲ್ಲಿ, ಸುಮಾರು 200 ಜನರು ಅಂದಾಜಿನಂತೆ ಈ ಕಾರ್ಯಕ್ರಮಕ್ಕೆ ಹಾಜರಾಗುವ ಸಾಧ್ಯತೆ ಇದೆ, ಇದು ಕೇಂದ್ರದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ದೂರಿದ್ದರು.
Get In Touch With Us info@kalpa.news Whatsapp: 9481252093
Discussion about this post