ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕಳೆದ ಒಂದು ವರ್ಷದ ಅವಧಿಯಲ್ಲಿ ಕುಡಿಯುವ ನೀರು, ಅಂತರ್ಜಲ ಅಭಿವೃದ್ಧಿ, ರಸ್ತೆ ಅಭಿವೃದ್ಧಿ, ಮೂಲಸೌಕರ್ಯ, ಉದ್ಯೋಗ ಸೃಷ್ಟಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಸಾಧನೆ ಮಾಡಿದೆ.
ಈ ಕುರಿತಂತೆ ಸ್ವತಃ ತಮ್ಮ ಖಾತೆಯ ಒಂದು ವರ್ಷದ ಸಾಧನೆಯನ್ನು ಎಳೆಎಳೆಯಾಗಿ ಅವರು ವಿವರಿಸಿದ್ದು, ಅವು ಇಂತಿವೆ.
ಅಂತರ್ಜಲ ಯೋಜನೆ
ಅಂತರ್ಜಲ ಯೋಜನೆಯಡಿ ಜಿಲ್ಲೆಯಲ್ಲಿ 27754 ಕಾಮಗಾರಿಗಳನ್ನು ಅನುಷ್ಡಾನಗೊಳಿಸಲಾಗುತ್ತಿದ್ದು, ಈಗಾಗಲೇ 1444 ಕಾಮಗಾರಿಗಳು ಆರಂಭಗೊಂಡಿವೆ. ಜಲಾಮೃತ ಯೋಜನೆಯಡಿ ಕಳೆದ ಸಾಲಿನಲ್ಲಿ 28 ಕೆರೆಗಳನ್ನು 5.20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, 2.40 ಕೋಟಿ ರೂ. ವೆಚ್ಚದಲ್ಲಿ 14 ಕೆರೆಗಳಿಗೆ ಈಗಾಗಲೇ ಕಾಯಕಲ್ಪ ನೀಡಲಾಗಿದೆ. ಈ ವರ್ಷ ಜಿಲ್ಲೆಯ 281 ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, 181 ಕೆರೆಗಳ ಅಭಿವೃದ್ಧಿಗೆ ಈಗಾಗಲೇ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಜಲ ಜೀವನ್ ಮಿಷನ್
ಪ್ರತಿ ಮನೆಗೆ ಶುದ್ಧ ನೀರು ಪೂರೈಸುವ ಮನೆಮನೆಗೆ ಗಂಗೆ ಯೋಜನೆಯಡಿ ಜಿಲ್ಲೆಯಲ್ಲಿ 288717 ಕುಟುಂಬಗಳಿಗೆ 1176 ಕೋಟಿ ರೂ. ವೆಚ್ಚದಲ್ಲಿ ವೈಯಕ್ತಿಕ ನಲ್ಲಿ ಒದಗಿಸಲು ಯೋಜನೆ ರೂಪಿಸಲಾಗಿದೆ. ಪ್ರಥಮ ಹಂತದಲ್ಲಿ 369 ಕೋಟಿ ರೂ. ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ.
ಉದ್ಯೋಗ ಖಾತ್ರಿ ಯೋಜನೆ
ನರೇಗಾ ಅಡಿ ಜಿಲ್ಲೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕೇವಲ 4 ತಿಂಗಳ ಅವಧಿಯಲ್ಲಿ 22.47 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿರುವುದು ದಾಖಲೆಯಾಗಿದೆ. ಈ ವರ್ಷ ಹೊಸದಾಗಿ 6822 ಹೊಸ ಉದ್ಯೋಗ ಚೀಟಿಗಳನ್ನು ವಿತರಿಸಿದ್ದು 4.80 ಕೋಟಿ ರೂ. ಕೂಲಿಯನ್ನು ಈಗಾಗಲೇ ಪಾವತಿಸಲಾಗಿದೆ.
ರಾಜ್ಯದಲ್ಲಿ 85 ಸಾವಿರಕ್ಕೂ ಅಧಿಕ ರೈತರು ತಮ್ಮ ಜಮೀನುಗಳಲ್ಲಿ ಕಂದಕ ಬದು ಹಾಗೂ 35 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡಗಳನ್ನು ನಿರ್ಮಿಸಿರುವುದು ದಾಖಲೆಯಾಗಿದೆ ಎಂದರು.
ಘನತ್ಯಾಜ್ಯ ವಿಲೇವಾರಿ
ಗ್ರಾಮೀಣ ಭಾಗದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಇದೇ ಮೊದಲ ಬಾರಿಗೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ 271 ಗ್ರಾಮ ಪಂಚಾಯತ್‌ಗಳ ಪೈಕಿ 50 ಗ್ರಾಮ ಪಂಚಾಯತ್‌ಗಳ ಪ್ರಸ್ತಾವನೆ ಸರ್ಕಾರ ಅನುಮೋದಿಸಿದ್ದು, ವಾಹನ ಖರೀದಿ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ.
ಗ್ರಾಮೀಣ ರಸ್ತೆ ಅಭಿವೃದ್ಧಿ
ರಾಜ್ಯದಲ್ಲಿ ಮೊದಲ ಹಂತದಲ್ಲಿ 3620 ಕಿಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು ಈಗಾಗಲೇ 909 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನುಳಿದ 2063 ಕಿಮೀ ಉದ್ದದ ರಸ್ತೆ ನಿರ್ಮಾಣ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಹಾಗೂ ಸೇತುವೆಗಳ ನಿರ್ಮಾಣಕ್ಕಾಗಿ 1500 ಕೋಟಿ ರೂ. ವಿಶೇಷ ಅನುದಾನ ಒದಗಿಸಲಾಗಿದ್ದು, ಒಟ್ಟು 8972 ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಹೇಳಿದರು.
ಕುಡಿಯುವ ನೀರು ಪೂರೈಕೆ
ರಾಜ್ಯದ 49 ಬರಪೀಡಿತ ತಾಲೂಕುಗಳಿಗೆ ತಲಾ 1 ಕೋಟಿ ರೂ. ಹಾಗೂ ಇತರ ತಾಲೂಕುಗಳಿಗೆ ತಲಾ 50ಲಕ್ಷ ರೂ. ಕುಡಿಯುವ ನೀರಿನ ಕಾಮಗಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ 474 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡಿದ್ದು, 1.15 ಕೋಟಿ ಗ್ರಾಮೀಣ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ.
ರಾಜ್ಯದ ಎಲ್ಲಾ 6012 ಗ್ರಾಮ ಪಂಚಾಯತ್ ಕಚೇರಿ ಕಟ್ಟಡಗಳಿಗೆ 3.4 ಲಕ್ಷ ರೂ. ವೆಚ್ಚದಲ್ಲಿ ಸೋಲಾರ್ ಅಳವಡಿಸಲು ಯೋಜನೆಯನ್ನು ರೂಪಿಸಲಾಗಿದೆ.
Get In Touch With Us info@kalpa.news Whatsapp: 9481252093

















