ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಪ್ಪಳ: ಬಿ.ಎಸ್. ಯಡಿಯೂರಪ್ಪ ಅವರೇ ಮುಂದಿನ ದಿನಗಳಲ್ಲಿಯೂ ಕೂಡ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸುಭದ್ರವಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರ ಸುಭದ್ರವಾಗಿದೆ. ಪೂರ್ಣ ಅವಧಿಯನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮುಗಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Get In Touch With Us info@kalpa.news Whatsapp: 9481252093

















