No Result
View All Result
hubballi-drucc-meeting-passenger-friendly-initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
0

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Monday, August 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕವನ್ನು ಜಾಗತಿಕ ಬಿಟಿ ಹಬ್ ಮಾಡಲು ಸರ್ವ ಕ್ರಮ: ಸಿಎಂ ಯಡಿಯೂರಪ್ಪ

kalpa News by kalpa News
July 29, 2020
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದ ಆರ್ಥಿಕತೆಯ ಶಕ್ತಿಯಾಗಿರುವ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಎಲ್ಲ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಹಾಗೂ ಕರ್ನಾಟಕವು ಜಾಗತಿಕ ’ಬಿಟಿ ಹಬ್’ ಆಗಿ ಹೊರಹೊಮ್ಮುವುದಕ್ಕೆ ಬೇಕಾದ ಸರ್ವ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬುಧವಾರ ’ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳೆರಡೂ ಬಹಳ ಮುಖ್ಯವಾದವು. ಆರ್ಥಿಕತೆ, ಉದ್ಯೋಗ ಸೃಷ್ಟಿಯಲ್ಲಿ ಇವೆರಡೂ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಹೀಗಾಗಿ ಈ ಎರಡೂ ಕ್ಷೇತ್ರಗಳಿಗೆ ಸರಕಾರ ಮಹತ್ವ ನೀಡಲಿದೆ ಎಂದರು.

ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದು ಕೈಗಾರಿಕೆ ಪೂರಕ ವಾತಾವರಣವನ್ನು ಸೃಷ್ಟಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ವಾಣಿಜ್ಯ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚು ಮನ್ನಣೆ ನೀಡಲಾಗುವುದು ಎಂದು ಸಿಎಂ ಒತ್ತಿ ಹೇಳಿದರು.

’ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ ರಾಜ್ಯದ ಜೈವಿಕ ತಂತ್ರಜ್ಞಾನ ಕ್ಷೇತ್ರದ ಪರಿಧಿಯನ್ನು ಮತ್ತಷ್ಟು ವಿಸ್ತಾರಗೊಳಿಸಲಿದೆ. ದೇಶದ ಬಿಟಿ ರಾಜಧಾನಿ ಆಗಿರುವ ಬೆಂಗಳೂರು ನಗರಕ್ಕೆ ಈ ಪಾರ್ಕ್ ಅನನ್ಯ ಕೊಡುಗೆ ನೀಡುವ ವಿಶ್ವಾಸ ನನಗಿದೆ. ಸರಕಾರವೂ ಈ ಯೋಜನೆಗೆ 150 ಕೋಟಿ ರೂ. ಅನುದಾನ ನೀಡಿದೆ.  150ಕ್ಕೂ ಹೆಚ್ಚು ಕಂಪನಿಗಳು ಈ ಪಾರ್ಕ್ ನಲ್ಲಿ ನೆಲೆಗೊಳ್ಳಲಿವೆ. 100ಕ್ಕೂ ಹೆಚ್ಚು ನವೋದ್ಯಮಗಳು ಸ್ಥಾಪನೆಯಾಗಲಿವೆ. ಇದರಿಂದ 50,000ಕ್ಕೂ ಹೆಚ್ಚು ಜನರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ಕೆಲಸ ಸಿಗಲಿದೆ. ರಾಜ್ಯದ ಅರ್ಥವ್ಯವಸ್ಥೆಗೆ ಈ ಯೋಜನೆ ಮಹತ್ವದ ಕಾಣಿಕೆ ನೀಡಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಬಿಟಿ ಕ್ಷೇತ್ರದಲ್ಲಿ ಕರ್ನಾಟಕ ದೊಡ್ಡ ಸಾಧನೆಯನ್ನೇ ಮಾಡಿದೆ. ಸದ್ಯಕ್ಕೆ ರಾಜ್ಯದಲ್ಲಿ 380 ಕಂಪನಿಗಳು, 200ಕ್ಕೂ ಹೆಚ್ಚು ನವೋದ್ಯಮಗಳು ಇದರಲ್ಲಿ ತೊಡಗಿಕೊಂಡಿವೆ. ಏಷ್ಯಾದಲ್ಲಿ ಶೇ.9ರಷ್ಟು, ಭಾರತದಲ್ಲಿ ಶೇ.35ರಷ್ಟು ಮಾರುಕಟ್ಟೆ ಪಾಲನ್ನು ನಾವು ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಗಣನೀಯವಾಗಿ ಹೆಚ್ಚಾಗಬೇಕು. ಅದಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸರಕಾರ ಸಿದ್ಧವಿದೆ ಎಂದು ಅವರು ಪ್ರಕಟಿಸಿದರು.

ಎರಡು ದಶಕಗಳ ಕನಸು
ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ’ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆ ಸಾಕಾರವಾಗುವ ಸಮಯ ಬಂದಿದೆ. ಈಗಾಗಲೇ ಪ್ರಬಲವಾಗಿ ಹೊರಹೊಮ್ಮಿರುವ ರಾಜ್ಯ ಬಿಟಿ ಕ್ಷೇತ್ರಕ್ಕೆ ಈ ಪಾರ್ಕ್ ಮೂಲಕ ಮತ್ತಷ್ಟು ಬಲ ಬರಲಿದೆ. ಸರಕಾರದ ಇಚ್ಚಾಶಕ್ತಿಯಿಂದ ಇದು ಸಾಧ್ಯವಾಗುತ್ತಿದೆ. ಸಂಶೋಧನೆ, ಅಭಿವೃದ್ಧಿ ಎಲ್ಲವೂ ಒಂದೇ ಸೂರಿನ ಅಡಿಯಲ್ಲಿ ಆಗಲಿದೆ. ಈ ಯೋಜನೆ ಸಾಕಾರಗೊಂಡ ಮೇಲೆ ಜಾಗತಿಕ ಭೂಪಟದಲ್ಲಿ ಬೆಂಗಳೂರಿನ ಪ್ರತಿಷ್ಠೆ ಮತ್ತಷ್ಟು ಹೆಚ್ಚಲಿದೆ ಎಂದರು.

ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ಈ ಕ್ಷೇತ್ರವಿಲ್ಲದೆ ಈಗ ಮನುಕುಲವನ್ನು ಊಹಿಸಿಕೊಳ್ಳುವುದೇ ಕಷ್ಟ. ಕೃಷಿ, ಕೈಗಾರಿಕೆ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಇದರ ಪ್ರಭಾವ ಇದೆ. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಸರಕಾರ ಅನೇಕ ಸುಧಾರಣಾ ಕ್ರಮಗಳನ್ನು ಜಾರಿ ಮಾಡಿದೆ. ‌ಉದ್ಯಮಸ್ನೇಹಿಯಾದ ಹತ್ತಾರು ಕ್ರಮಗಳನ್ನು ದಿಟ್ಟತನದಿಂದ ಕೈಗೊಂಡಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಹತ್ತುಹಲವು ಕಾನೂನುಗಳನ್ನು ಸರಳಗೊಳಿಸಿ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು.

ಸಂಶೋಧನೆ ಮತ್ತು ಹೊಸ ಅವಿಷ್ಕಾರಗಳಿಗಿದ್ದ ಕಾನೂನು ತೊಡಕನ್ನು ನಿವಾರಿಸಲಾಗಿದೆ. ’ಕರ್ನಾಟಕ ಇನೋವೆಷನ್ ಅಥಾರಿಟ”ಯನ್ನು ಸ್ಥಾಪಿಸಲಾಗಿದೆ. ’ಇನ್’ವೆಸ್ಟ್ ಕರ್ನಾಟಕ ಮೂಲಕ ಹೂಡಿಕೆಗೆ ಮುಕ್ತ ಅವಕಾಶ ಕಲ್ಪಿ ಸಲಾಗಿದೆ. ದೇಶದ ಯಾವುದೇ ರಾಜ್ಯವೂ ಕೈಕೊಳ್ಳದಂತಹ ಪರಿಣಾಮಕಾರಿ ಕ್ರಮಗಳನ್ನು ಯಡಿಯೂರಪ್ಪ ನೇತೃತ್ವದ ಸರಕಾರ ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ನುಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಶಾಸಕ ಎಂ. ಕೃಷ್ಣಪ್ಪ ಮಾತನಾಡಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಮಣ ರೆಡ್ಡಿ, ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್ ಸಿಇಒ ಚಿರಾಗ್ ಪುರುಷೋತ್ತಮ್ ಯೋಜನೆಯ ಮಾಹಿತಿ ನೀಡಿದರು. ಕರ್ನಾಟಕ ಕೈಗಾರಿಕಾ ತಾಂತ್ರಿಕ ಸಂಸ್ಥೆಯ ನಿರ್ದೇಶಕಿ ಮೀನಾ ನಾಗರಾಜ್  ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: B S YediyurappaBENGALURUBT HubIT BTKannada News WebsiteLatest News Kannadaಐಟಿ-ಬಿಟಿಬಿ.ಎಸ್. ಯಡಿಯೂರಪ್ಪಬಿಟಿ ಹಬ್ಮುಖ್ಯಮಂತ್ರಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಯ ಸೇನೆಗೆ ಬಂತು ಆನೆ ಬಲ: ಭರತ ಭೂಮಿ ಸ್ಪರ್ಷಿಸಿದ ರಫೇಲ್ ಯುದ್ದ ವಿಮಾನಗಳು

Next Post

ಸಮಾಜ ಕೆಡವುವ ಕೆಲಸ ಮಾಡಲ್ಲ, ಪಠ್ಯ ಕಡಿತ ಅಂತಿಮವಾಗಿಲ್ಲ: ಸಚಿವ ಸುರೇಶ್ ಕುಮಾರ್

kalpa News

kalpa News

Next Post
ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿಲ್ಲ, ತರಾತುರಿಯಲ್ಲಿ ತೆರೆಯುವುದಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಸಮಾಜ ಕೆಡವುವ ಕೆಲಸ ಮಾಡಲ್ಲ, ಪಠ್ಯ ಕಡಿತ ಅಂತಿಮವಾಗಿಲ್ಲ: ಸಚಿವ ಸುರೇಶ್ ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
hubballi-drucc-meeting-passenger-friendly-initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
0

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL