ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸ್ಯಾಂಡಲ್’ವುಡ್ ನಾಯಕತ್ವ ವಹಿಸಿದ ಬೆನ್ನಲ್ಲೇ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆದಿದ್ದು, ಹಲವು ವಿಚಾರಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ.
ರವಿಚಂದ್ರನ್, ರಮೇಶ್ ಅರವಿಂದ್, ಉಪೇಂದ್ರ, ಪುನೀತ್ ರಾಜ್‌ಕುಮಾರ್, ಯಶ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ಗಣೇಶ್, ದುನಿಯಾ ವಿಜಯ್ ಇನ್ನೂ ಹತ್ತು ಹಲವು ನಟ ನಿರ್ಮಾಪಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿಯಾದ ಚಿತ್ರರಂಗದ ಗಣ್ಯರ ತಂಡ, ಚಿತ್ರೀಕರಣ ಪುನರಾರಂಭ, ಚಿತ್ರ ಕಲಾವಿದರಿಗೆ ನೆರವು ನೀಡುವಂತೆ ಮನವಿ ಮಾಡಿದರು.
ಕಿರುತೆರೆ ಮತ್ತು ಚಲನಚಿತ್ರ ಉದ್ಯಮವನ್ನು ಅವಲಂಭಿಸಿರುವ ಕಾರ್ಮಿಕರಿಗೆ ಪ್ಯಾಕೇಜ್ ಹಾಗೂ ಚಿತ್ರರಂಗದ ಪುನಶ್ಚೇತನದ ನೆರವಿಗಾಗಿ ಮನವಿ ಮಾಡಲಾಗಿದ್ದು, ಚಿತ್ರಮಂದಿರ ತೆರೆಯಲು, ದರ ನಿಗದಿ, ತೆರಿಗೆ ವಿನಾಯಿತಿ ಬಗ್ಗೆ ಚರ್ಚೆ ನಡೆಸಲಾಗಿದೆ.
ಮನವಿ ಸ್ವೀಕರಿಸಿದ ಸಚಿವರು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post