No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಲಿ: ರಾಘವೇಶ್ವರ ಶ್ರೀ

kalpa News by kalpa News
September 2, 2016
in ಶಿವಮೊಗ್ಗ
0
Share on FacebookShare on TwitterShare on WhatsApp

ಬೆಂಗಳೂರು, ಸೆ.2: ನಾಡಿನ ದೊರೆಗಳು ಗೋರಕ್ಷಕರ ಬಗ್ಗೆ ಮಾತನಾಡುವ ಬದಲು, ಸಂವಿಧಾನದ ಆಶಯದಂತೆ ಗೋರಕ್ಷಣೆಯಲ್ಲಿ ತೊಡಗಿಕೊಳ್ಳಬೇಕಿದೆ. ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಬೇಕಾದ ಅನಿವಾರ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಗೋವನ್ನು ಉಳಿಸಿ – ಬೆಳಸಿ – ಪೂಜಿಸಿ ಎನ್ನುವುದು ಕೇವಲ ಯಾವುದೋ ವರ್ಗದ ನಂಬಿಕೆ ಅಥವಾ ಆಗ್ರಹಮಾತ್ರವಲ್ಲ. ವೇದ – ಉಪನಿಷತ್ತುಗಳಲ್ಲಿ ಗೋರಕ್ಷಣೆಗೆ ಕರೆನೀಡಲಾಗಿದೆ ಎಂದು ಗೋವನ್ನು ರಕ್ಷಿಸಬೇಕಾಗಿಲ್ಲ. ಧರ್ಮನಿರಪೇಕ್ಷ ರಾಷ್ಟ್ರವಾದ ನಮ್ಮ ದೇಶದ ಸಂವಿಧಾನದ ‘ರಾಜ್ಯ ನೀತೀಯ ಮಾರ್ಗದರ್ಶಿ ಸೂತ್ರ’ ಪರಿಚ್ಛೇದದಲ್ಲಿ ಗೋಸಂರಕ್ಷಣೆಯಲ್ಲಿ ಸರ್ಕಾರ ತೊಡಗಿಕೊಳ್ಳಬೇಕು ಎಂದು ಸೂಚಿಸಿದೆ. ಸಂವಿಧಾನವನ್ನು ಸರ್ಕಾರಗಳು ಒಪ್ಪುವುದಾದರೆ ಸರ್ಕಾರಗಳು ಗೋರಕ್ಷಣೆಯಲ್ಲಿ ತೊಡಗಿಕೊಳ್ಳಲೇ ಬೇಕು ಎಂದು ಆಗ್ರಹಿಸಿದರು.

ಸ್ವಾತಂತ್ರ್ಯಾನಂತರದಲ್ಲಿ ನಮ್ಮನ್ನಾಳಿದವರು ಗೋರಕ್ಷಣೆಗೆ ಏನು ಮಾಡಿದ್ದಾರೆ ಎಂದ ಪ್ರಶ್ನಿಸಿದ ಶ್ರೀಗಳು, ಮೈಸೂರು ಮಹಾರಾಜರು ಅಮೃತಮಹಲ್ ತಳಿಯನ್ನು ವಿಶೇಷವಾಗಿ ರಕ್ಷಿಸಿದ್ದರು, ಮೈಸೂರು ಮಹಾರಾಜರಿಗೆ  ಯುದ್ಧಗಳಲ್ಲೂ ಸಹಕರಿಸಿದ್ದ ಅಮೃತಮಹಲ್ ಇಂದು ವಿನಾಶದ ಅಂಚಿನಲ್ಲಿದೆ. ಸರ್ಕಾರಗಳು ಈ ಬಗ್ಗೆ ಗಮನಹರಿಸಬೇಕಾದ ಅನಿವಾರ್ಯತೆ ಇದೆ ಎಂದರು.

ಶ್ರೀರಮಾನಂದ ಸ್ವಾಮಿಜಿ, ಶಿವಾನಂದಾಶ್ರಮ, ನೆಲಮಂಗಲ ಸಂತಸಂದೇಶ ನೀಡಿ, ಮನುಕುಲದ ರಕ್ಷಣೆಗಾಗಿ ಗೋವನ್ನು ಸಂರಕ್ಷಿಸಬೇಕಿದೆ, ಗೋರಕ್ಷಣೆಗಾಗಿಯೇ ಜೀವನವನ್ನು ಮುಡಿಪಾಗಿಟ್ಟ ರಾಘವೇಶ್ವರ ಶ್ರೀಗಳ ಕಾರ್ಯ ಎಲ್ಲರಿಗೂ ಅನುಕರಣೀಯ ಎಂದು ಹೇಳಿದರು.

ಸಬೆಯಲ್ಲಿ ‘ಧವಳಗಿರಿ’ ನಂದಿಯೊಂದಿಗೆ ರಾಘವೇಶ್ವರ ಶ್ರೀಗಳು ಹಾಗೂ ಶ್ರೀರಮಾನಂದ ಸ್ವಾಮಿಜಿ
ಸಬೆಯಲ್ಲಿ ‘ಧವಳಗಿರಿ’ ನಂದಿಯೊಂದಿಗೆ ರಾಘವೇಶ್ವರ ಶ್ರೀಗಳು ಹಾಗೂ ಶ್ರೀರಮಾನಂದ ಸ್ವಾಮಿಜಿ

ನಾಗಪುರದ ಗೋವಿಜ್ಞಾನ ಅನುಸಂಧಾನ ಕೇಂದ್ರದ ಕಾರ್ಯದರ್ಶಿಗಳಾದ ಡಾ. ಸುನಿಲ್ ಮಾನ್ ಸಿಂಗ್ ಕಾ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು. ಅವರು ಗೋವಿಗೆ ಸಂಬಂಧಿಸಿದ ವೈಜ್ಞಾನಿಕ ವಿಚಾರಗಳನ್ನು ಹಂಚಿಕೊಂಡರು.  ಶ್ರೀಭಾರತೀಪ್ರಕಾಶನವು ಹೊರತಂದ ಅಹಲ್ಯಾಬಾಯಿ ಹೋಳ್ಕರ್ ಗೋಕಥಾ – ದೃಶ್ಯಮುದ್ರಿಕೆ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಸಾನ್ನಿಧ್ಯವಹಿಸಿದ್ದ ಶ್ರೀಗಳು ಲೋಕಾರ್ಪಣೆ ಮಾಡಿದರು. ನಿರ್ಮಾಣ ವಿಭಾಗದಲ್ಲಿ ಉತ್ತಮ ಸೇವೆಸಲ್ಲಿಸಿದ ಮನಮೋಹನ ಕಲಗಲ್ ಅವರನ್ನು ಶ್ರೀಗಳು ಸನ್ಮಾನಿಸಿದರು. ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿ ಅರಭಿ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

ಶ್ರೀಮಠದ ನಿರ್ಮಾಣ ವಿಭಾಗದಿಂದ ಸರ್ವಸೇವೆ ನೆರವೇರಿತು, ಅನೇಕ ನಿರ್ಮಾಣ ತಂತ್ರಜ್ಞರು ಭಾಗವಹಿಸಿ ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

ಗೋವಿಜ್ಞಾನ ಅನುಸಂಧಾನ ಕೇಂದ್ರದ ಕಾರ್ಯದರ್ಶಿಗಳಾದ ಡಾ. ಸುನಿಲ್ ಮಾನ್ ಸಿಂಗ್ ಕಾ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು
ಗೋವಿಜ್ಞಾನ ಅನುಸಂಧಾನ ಕೇಂದ್ರದ ಕಾರ್ಯದರ್ಶಿಗಳಾದ ಡಾ. ಸುನಿಲ್ ಮಾನ್ ಸಿಂಗ್ ಕಾ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು

ಭಾರತದ ಸಂವಿಧಾನದ ನಾಲ್ಕನೆಯ ಭಾಗವಾದ Directive Principles of State Policy (ರಾಜ್ಯ ನೀತಿಯ ಮಾರ್ಗದರ್ಶಿ ಸೂತ್ರಗಳು) 48 ನೆಯ ವಿಷಯ (article) ಈ ರೀತಿ ಹೇಳುತ್ತದೆ:

  1. The State shall endeavour to organise agriculture and animal husbandry on modern and scientific lines and shall, in particular, take steps for preserving and
    improving the breeds, and prohibiting the slaughter, of cows and calves and other milch and draught cattle.

ಸರಕಾರಕ್ಕೆ ನಮ್ಮ ಸಂದೇಶ ಇಷ್ಟೇ: “ನಾವು ಹೇಳಿದ್ದನ್ನು ಮಾಡಬೇಡಿ, ಸಂವಿಧಾನ ಕರ್ತೃಗಳು ನಿಮಗೆ ಆದೇಶಿಸಿದ್ದನ್ನು ಮಾಡಿ!

– ಶ್ರೀರಾಘವೇಶ್ವರಭಾರತೀ ಸ್ವಾಮಿಗಳು

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಂಜನಗೂಡಿನಲ್ಲಿ ಬಂದ್ ಬಹುತೇಕ ಯಶಸ್ವಿ

Next Post

ಮಹದಾಯಿ: ಸಿಎಂ ಮುಂದೆ ನಿಂತು ಸಮಸ್ಯೆ ಬಗೆಹರಿಸಬೇಕು: ಜಗದೀಶ್ ಶೆಟ್ಟರ್

kalpa News

kalpa News

Next Post

ಮಹದಾಯಿ: ಸಿಎಂ ಮುಂದೆ ನಿಂತು ಸಮಸ್ಯೆ ಬಗೆಹರಿಸಬೇಕು: ಜಗದೀಶ್ ಶೆಟ್ಟರ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL