ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ.
ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.
Get In Touch With Us info@kalpa.news Whatsapp: 9481252093
















