ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್’ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020
ತಮ್ಮ ಗೃಹ ಕಚೇರಿ ಸಿಬ್ಬಂದಿಯೊಬ್ಬರಿಗೆ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಹಲವು ದಿನಗಳ ಕಾಲ ಮುಖ್ಯಮಂತ್ರಿಗಳು ಹೋಂ ಕ್ವಾರಂಟೈನ್’ಗೆ ಒಳಗಾಗಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು. ಆದರೂ ಅವರಿಗೆ ಸೋಂಕು ತಗುಲಿದೆ.
ಈಗಾಗಲೇ ದೇಶದ ಗಣ್ಯಾತಿಗಣ್ಯರಲ್ಲೂ ಸಹ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಇಂದು ಸಂಜೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು ದೃಢಪಟ್ಟಿದೆ.
Get In Touch With Us info@kalpa.news Whatsapp: 9481252093
Discussion about this post