ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಇಂದು ರಾತ್ರಿ 9 ಗಂಟೆ ವೇಳೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಧಾರುಣ ಘಟನೆ ನಡೆದಿದೆ.
ನಗರದ ಬಜಾಜ್ ಶೋ ರೂಂ ಬಳಿ ತೆರಳುತ್ತಿದ್ದ ಸಂಜಯ್ ಎಂಬ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಕನಿಷ್ಠ ನಿಲ್ಲಿಸಿ ನೋಡುವ ಮಾನವೀಯತೆಯನ್ನೂ ಸಹ ತೋರದ ಕಾರಿನವರು ಅಲ್ಲಿಂದ ಪರಾರಿಯಾಗಿದ್ದಾರೆ.
ಕಾರು ಡಿಕ್ಕಿಯಾದ ರಭಸಕ್ಕೆ ಬಾಲಕ ಸಾವನ್ನಪ್ಪಿದ್ದಾನೆ. ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ.
Get In Touch With Us info@kalpa.news Whatsapp: 9481252093
















