ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಹಾಗೂ ಜಿಲ್ಲಾಧಿಕಾರಿ ಶಿವಕುಮಾರ್ ಅವರು ಇಂದು ಹೊಸ ಸೇತುವೆ ಪರಿಶೀಲನೆ ನಡೆಸಿದರು.
ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದ ಬಳಿಯಿರುವ ಹೊಸ ಸೇತುವೆ ಪ್ರದೇಶಕ್ಕೆ ಭೇಟಿ ನೀಡಿ ಸೇತುವೆಯ ಸ್ಥಿತಿಗತಿ ಪರಿಶೀಲಿಸಿ, ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದರೆ ಕೈಗೊಳ್ಳಬೇಕಾಗಬಹುದಾದ ಕ್ರಮಗಳ ಕುರಿತು ನಗರಸಭೆ ಆಯುಕ್ತ ಮನೋಹರ್ ತಹಶೀಲ್ದಾರ್ ಶಿವಕುಮಾರ್ ಅವರಿಂದ ಮಾಹಿತಿ ಪಡೆದು ಸಲಹೆ ಸೂಚನೆ ನೀಡಿದರು.

ಈ ಸಂಧರ್ಭದಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಹಾಗೂ ಕಂದಾಯಾಧಿಕಾರಿಗಳು ಸೇರಿದಂತೆ ತಹಶೀಲ್ದಾರ್ ಶಿವಕುಮಾರ್, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
Get In Touch With Us info@kalpa.news Whatsapp: 9481252093














