ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ರಾಜಮಲಾದ ಪೆಟ್ಟಿಮುಡಿ ಬೆಟ್ಟ ಕುಸಿದು ಬಿದ್ದ ಪರಿಣಾಮ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ನಿರಂತರ ಮಳೆಯ ಪರಿಣಾಮ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು, ಅವಶೇಷಗಳಡಿಯಲ್ಲಿ 80 ಮಂದಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಇದುವರೆಗೆ 15 ಮಂದಿಯ ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದ್ದು, ಏಳು ಮಂದಿಯನ್ನು ಮಣ್ಣಿನಡಿಯಿಂದ ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು, ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post