ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ರ ಕೆ.ಆರ್. ಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿದ ಘಟನೆ ನಡೆದಿದ್ದು, ಬಸ್’ನಲ್ಲಿದ್ದ ಓರ್ವ ಮಗು ಸೇರಿ ಐದು ಜನ ಪ್ರಯಾಣಿಕರು ಸಜೀವ ದಹನ ಶಂಕೆ ವ್ಯಕ್ತವಾಗಿದೆ.
ಬಿಜಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎಂದು ತಿಳಿದಿದ್ದು, ಬಸ್’ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿತ್ತಿದ್ದರು ಎಂಬುದು ತಿಳಿದಿದೆ.
30 ಜನರಿಗೆ ಗಂಭೀರ ಗಾಯಗಳಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳನ್ನು ಹಿರಿಯೂರು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರ ಸಾಹ ಪಟ್ಟರು. ಅಗ್ನಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ವರದಿ: ಸುರೇಶ ಬೆಳಗೆರೆ, ಚಿತ್ರದುರ್ಗ)
Get In Touch With Us info@kalpa.news Whatsapp: 9481252093







