ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಹಿರಿಯ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ಘೋಷಿಸಿದೆ.
ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಹಿಂದಿನ ನಾಲ್ವರು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಮಾಡಿರುವ ಟ್ವೀಟ್ ನ್ಯಾಯಾಂಗ ನಿಂದನೆಯಾಗಿದೆ ಎಂದು ಇಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಪ್ರಶಾಂತ್ ಭೂಷಣ ತಪ್ಪಿತಸ್ಥ ಎಂದು ಹೇಳಿದ್ದು, 6 ತಿಂಗಳು ಜೈಲು ಶಿಕ್ಷೆ ಅಥವಾ 2 ಸಾವಿರ ರೂ. ದಂಡ ಅಥವಾ ಜೈಲುವಾಸ ಮತ್ತು ದಂಡ ಎರಡನ್ನೂ ವಿಧಿಸಬಹುದಾಗಿದೆ.
ನ್ಯಾಯವಾದಿ ಪ್ರಶಾಂತ್ ಭೂಷಣ್ ಕಳೆದ ಜೂನ್ 27ರಂದು ಸುಪ್ರೀಂ ಕೋರ್ಟ್ ಬಗ್ಗೆ ಮತ್ತು ಜೂನ್ 29ರಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಬಗ್ಗೆ ಟ್ವೀಟ್ ಮಾಡಿದ್ದರು. ಅದು ವೈರಲ್ ಆಗಿ ನ್ಯಾಯಾಂಗ ನಿಂದನೆಯಾಗಿದೆ ಎಂದು ವ್ಯಾಪಕ ಟೀಕೆ ಬಂದ ನಂತರ ಎರಡೂ ಟ್ವೀಟ್ ಗಳನ್ನು ಟ್ವಿಟ್ಟರ್ ತೆಗೆದುಹಾಕಿತ್ತು.
Get In Touch With Us info@kalpa.news Whatsapp: 9481252093













