ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 223 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4766ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದರೆ, 50 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು, ಈವರೆಗೂ 1885 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 654 ಆಗಿದೆ. ಇಂದು ಒಟ್ಟು 1551 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 797 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1809 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 55 ಭದ್ರಾವತಿ: 66 ಶಿಕಾರಿಪುರ: 70 ತೀರ್ಥಹಳ್ಳಿ: 9 ಹೊಸನಗರ: 6 ಸೊರಬ: 11 ಇತರೆ ಜಿಲ್ಲೆ: 6
Get In Touch With Us info@kalpa.news Whatsapp: 9481252093














