No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮನುಷ್ಯನ ಗುಣಗಳೇ ಕೆಲವೊಮ್ಮೆ ಶತ್ರುಗಳಾಗುತ್ತವೆ: ರಾಘವೇಶ್ವರ ಸ್ವಾಮೀಜಿ

kalpa News by kalpa News
September 4, 2016
in ಬೆಂಗಳೂರು ನಗರ, ಶಿವಮೊಗ್ಗ
0
Share on FacebookShare on TwitterShare on WhatsApp

ಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಗೋ ಅಪಹರಣ ತಡೆಯಲು ಹೋರಾಡಿದ ಪಾಂಡವರ ಕಥೆಯನ್ನು ನಿರೂಪಿಸಿದ ಶ್ರೀಗಳು, ನಮ್ಮ ಸ್ವಭಾವದ ಬಗ್ಗೆ ಸ್ನೇಹಿತರಿಗಿಂತ, ವೈರಿಗಳಿಗೇ ಹೆಚ್ಚು ತಿಳಿದಿರುತ್ತದೆ. ಅಜ್ಞಾತವಾಸದಲ್ಲಿದ್ದ ಪಾಂಡವರನ್ನು ಹುಡುಕಲು ಕೌರವರು ಗೋ ಅಪಹರಣ ಮಾಡಿದರು. ಪಾಂಡವರ ಗೋ ಪ್ರೇಮದ ಅರಿವಿರುವುದರಿಂದಲೇ ಗೋವನ್ನು ದಾಳವಾಗಿ ಬಳಸಿದರು. ಗುಣಗಳೂ ಶತ್ರುಗಳಾಗಬಹುದಾದ ಸಾಧ್ಯತೆ ಇದ್ದು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂಬ ಕಿವಿಮಾತು ಹೇಳಿದರು.

ವಿರಾಟರಾಯನ ಗೋವುಗಳು ಅಪಹರಣವಾಗುತ್ತಿದ್ದಾಗ ಶಾಂತಿಪ್ರಿಯನಾದ ಧರ್ಮರಾಜನೂ ಗೋವುಗಳಿಗಾಗಿ ಯುದ್ಧಕ್ಕೆ ಮುಂದಾದ, ಉತ್ತರಕುಮಾರನು ತನ್ನ ದೌರ್ಬಲ್ಯವನ್ನು ತೊರೆದು ವೀರ ಗೋರಕ್ಷಕನಾದ, ಅರ್ಜುನ ಬೃಹನ್ನಳೆಯ ರೂಪವನ್ನು ತೊರೆದು ತನ್ನ ಗಾಂಡೀವವನ್ನು ಹಿಡಿದು ಲಕ್ಷಲಕ್ಷ ಸಂಖ್ಯೆಯ ಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋವುಗಳನ್ನು ಸಂರಕ್ಷಿಸಿ ತನ್ನ ಗೋಪ್ರೇಮವನ್ನು ಮೆರೆದ. ಇವರೆಲ್ಲರ ನಡೆ ನಮಗೆ ಅನುಕರಣೀಯ, ಭಾರತರೆಲ್ಲರೂ ಗೋಸಂರಕ್ಷಣೆಗೆ ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದರು.

 ಗೋಕಥಾದಲ್ಲಿ ಶ್ರೀಗಳ ಕಥಾನಿರೂಪಣೆಗೆ ಸಂಬಂಧಿಸಿ ಚಿತ್ರ ರಚನೆಯಲ್ಲಿ ತೊಡಗಿರುವ ನೀರ್ನಳ್ಳಿ ಗಣಪತಿ ಹೆಗಡೆ
ಗೋಕಥಾದಲ್ಲಿ ಶ್ರೀಗಳ ಕಥಾನಿರೂಪಣೆಗೆ ಸಂಬಂಧಿಸಿ ಚಿತ್ರ ರಚನೆಯಲ್ಲಿ ತೊಡಗಿರುವ ನೀರ್ನಳ್ಳಿ ಗಣಪತಿ ಹೆಗಡೆ

ಗೋಸೇವೆ ವನವಾಸಿಗಳನ್ನು ರಾಜಭವನ ವಾಸಿಗಳನ್ನಾಗಿಸುತ್ತದೆ, ಗೋವಿನ ಹಿಂಸೆ ರಾಜಭವನ ವಾಸಿಗಳೇ ಆದರೂ ಅವರನ್ನು ಯಮರಾಜಭವನ ವಾಸಿಗಳನ್ನಗಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರವಚನ, ಕಥನ, ಗಾಯನ, ರೂಪಕಗಳನ್ನೊಳಗೊಂಡ ಈ ಗೋಕಥೆಯಲ್ಲಿ ಸಂದರ್ಭಕ್ಕೆ ಹೊಂದುವ ಚಿತ್ರಗಳನ್ನು ನೀರ್ನಳ್ಳೀ ಗಣಪತಿ ಅವರು ಮನಮೋಹಕವಾಗಿ ಚಿತ್ರಿಸಿದರು. ಡಾ| ಗಜಾನನ ಶರ್ಮ ಅವರ ಸಾಹಿತ್ಯ ಸಹಕಾರ, ಗಾಯನದಲ್ಲಿ ಶ್ರೀಪಾದ ಭಟ್, ದೀಪಿಕಾ ಭಟ್, ಶೃತಿರಂಜಿನಿ, ಸತ್ಯಜಿತ್ ಜೈನ್ ಕೊಲ್ಕೋತಾ, ಶ್ರದ್ಧಾ, ಪ್ರಿಯಾ ಕೊರಿಕ್ಕಾರ್, ರಘುನಂದನ ಬೇರ್ಕಡವು ಹಾಗೂ ಸಂಗೀತ ವಾದ್ಯಗಳಲ್ಲಿ ಪ್ರಜ್ಞಾನಲೀಲಾಶುಕ ಉಪಾಧ್ಯಾಯ, ಗಣೇಶ್ ಕೆ.ಎಸ್., ಗಣೇಶ್ ಗುಂಡ್ಕಲ್, ಆದಿತ್ಯ ಭಟ್ ಕೆಕ್ಕಾರು ಮೊದಲಾದವರು ಭಾಗವಹಿಸಿದ್ದರು. ಅನಂತರ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರ ಸಾರಥ್ಯದಲ್ಲಿ ರೂಪಕ ನಡೆಯಿತು. ಸಾವಿರಾರು ಜನರು ಈ ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಗೋಕಥೆಯ ನಂತರ ಶ್ರೀಗಳು ಹಾಗೂ ಗೋವಿನ ಸಮ್ಮುಖದಲ್ಲಿ ಸೇರಿದ ಸಾವಿರಾರು ಜನರು ಗೋರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಂಡರು
ಗೋಕಥೆಯ ನಂತರ ಶ್ರೀಗಳು ಹಾಗೂ ಗೋವಿನ ಸಮ್ಮುಖದಲ್ಲಿ ಸೇರಿದ ಸಾವಿರಾರು ಜನರು ಗೋರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಂಡರು

ಗೋಕಥೆಯ ನಂತರ ಶ್ರೀಗಳು ಹಾಗೂ ಗೋವಿನ ಸಮ್ಮುಖದಲ್ಲಿ ಸೇರಿದ ಸಾವಿರಾರು ಜನರು ಗೋರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಂಡರು, ಗೋಕುಲಕ್ಕೆ ಒಳಿತಾಗಲೆಂಬ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು. ವಕೀಲರ ಬಳಗ ಇಂದಿನ ಗೋಕಥೆಯ ಪ್ರಾಯೋಜಕತ್ವವನ್ನು ವಹಿಸಿತ್ತು, ಬಳಗದ ಪರವಾಗಿ ವೈ ಕೆ ಎನ್ ಶರ್ಮಾ ಅವರು ಪುಷ್ಪಾರ್ಚನೆ ನೆರವೇರಿಸಿದರು. ಮಾ ಗೋ ಪ್ರಾಡೆಕ್ಟ್ಸ್ ನ ಮಹಾವೀರ್ ಸೋನಿಕಾ ಶ್ರೀಗಳ ಮಾರ್ಗದರ್ಶನದಲ್ಲಿ ಉತ್ಪಾದಿಸಲಾಗುತ್ತಿರುವ ವಿಶ್ವದರ್ಜೆಯ ಗವ್ಯೋತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.

ಗೋಕಥಾದಲ್ಲಿ ಮೂಡಿಬಂದ ರೂಪಕದ ದೃಶ್ಯ
ಗೋಕಥಾದಲ್ಲಿ ಮೂಡಿಬಂದ ರೂಪಕದ ದೃಶ್ಯ

ಮಧ್ಯಾಹ್ನ ನಡೆದ ಸಭೆಯಲ್ಲಿ ಶ್ರೀಭಾರತೀಪ್ರಕಾಶನವು ಹೊರತಂದಿರುವ ಗೋಕಥಾಗೀತೆ ಹಾಗೂ ಸಾಧನಾಪಂಚಕದ ದೃಶ್ಯಮುದ್ರಿಕೆಯನ್ನು ಪೂಜ್ಯ ಶ್ರೀಗಳು ಲೋಕಾರ್ಪಣೆಗೊಳಿಸಿದರು. ಕಂಪನಿ ಕಾರ್ಯದರ್ಶಿಗಳ ಬಳಗ ಇಂದಿನ ಸರ್ವಸೇವೆಯನ್ನು ನೆರವೇರಿಸಿತು. ಉದ್ಯಮಿಗಳಾದ ಮಹಾವೀರ್ ಸೋನಿಕಾ , ನ್ಯಾಯವಾದಿಗಳಾದ ಶಂಭುಶರ್ಮ, ಶ್ರೀಮಠದ ಪದಾಧಿಕಾರಿಗಳು, ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಶ್ರೀ ಸೂಕ್ತ ಜಪ, ಶ್ರೀ ಸೂಕ್ತ ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ ನಡೆಯಿತು.

ಗಣೇಶಚತುರ್ಥಿ (5.09.2016):
ಗೋ-ಗಣಪತಿಯ ಪ್ರಾಣ ಪ್ರತಿಷ್ಠೆಯೊಂದಿಗೆ ಕಲ್ಪೋಕ್ತಪೂಜೆ ನೆರವೇರಲಿದ್ದು, ಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಗೋ-ಗಣಪತಿಗೆ ವಿಶೇಷ ಪೂಜೆಯನ್ನು ನೆರವೇರಿಸಲಿದ್ದಾರೆ. ಮಹಾಗಣಪತಿ ಹವನ, ಕ್ಷಿಪ್ರಗಣಪತಿ ಹವನ, ಸಹಸ್ರ ಅಪ್ಪ(ಅಪೂಪ) ಸೇವೆ, ಸಹಸ್ರದೂರ್ವಾಚನೆ, ಅಷ್ಟಾವಧಾನ ಸೇವೆ, ಅಥರ್ವಶೀರ್ಷ ಪಾರಾಯಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ನಾಲ್ಕುದಿನಗಳ ಕಾಲ ಗೋ-ಗಣಪತಿಯ ಉಪಾಸನೆ ನೆರವೇರಲಿದೆ.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷ್ಣಮಠದ ಸುತುಪೌಳಿ ನವೀಕರಣಕ್ಕೆ ಚಾಲನೆ

Next Post

ನಮೋ ಜ್ಞಾನರೂಪಂ, ಗಣೇಶಂ ನಮಸ್ತೆ.

kalpa News

kalpa News

Next Post

ನಮೋ ಜ್ಞಾನರೂಪಂ, ಗಣೇಶಂ ನಮಸ್ತೆ.

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL