ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹಳೇನಗರದ ಸಂಚಿಹೊನ್ನಮ್ಮ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ.ಎಂ. ಮೇಘರಾಜ್ ಅವರು ಇತ್ತೀಚೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಎಬಿವಿಪಿ ರಾಜ್ಯ ಉಪಾಧ್ಯಕ್ಷರಾಗಿ ಹಾಗೂ ಹಾಲಿ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ವಿಭಾಗದ ಸಂಘಟನೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು 2014-2016 ರವರೆಗೆ ಕುವೆಂಪು ವಿವಿ ಅಕಾಡೆಮಿ ಕೌನ್ಸಿಲ್ ಸದಸ್ಯರಾಗಿ, ಸಹ ಸೇವೆ ಸಲ್ಲಿಸಿದ್ದರು. ಕಳೆದ ತಿಂಗಳು ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರ ಕಲ್ಲಹಳ್ಳಿಗ್ರಾಮದಲ್ಲಿ ನೆರವೇರಿತು.
Get In Touch With Us info@kalpa.news Whatsapp: 9481252093














