ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸೋನಿಯಾಗಾಂಧಿ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡುತ್ತಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಒಂದು ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರೂ ಸಹ ಸೇರಿಕೊಳ್ಳುವುದಿಲ್ಲ ದೇಶಕ್ಕೆ ಸ್ವತಂತ್ರ ಬಂದಾಗಲೇ ಕಾಂಗ್ರೆಸ್ ವಿಸರ್ಜನೆ ಮಾಡುವಂತೆ ಮಹಾತ್ಮ ಗಾಂಧೀಜಿಯವರು ಹೇಳಿದ್ದರು. ಆದರೆ, ಈಗ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡುತ್ತಾರೆ ಎಂದರು.
ಸೋನಿಯಾಗಾಂಧಿ ಎಐಸಿಸಿ ಅಧ್ಯಕ್ಷರಾಗಲಿ ಎಂದು ಕೆಲವು ಕಾಂಗ್ರೆಸ್ಸಿಗಳು ಹೇಳುತ್ತಾರೆ. ಬೇಡ ಬೇರೆಯವರು ಆಗಲಿ ಎಂದು ಇನ್ನು ಕೆಲವರು ಹೇಳುತ್ತಾರೆ. ಅವರಲ್ಲೇ ಒಮ್ಮತದ ನಿರ್ಧಾರವಿಲ್ಲದೇ ಗೊಂದಲದಲ್ಲಿದ್ದಾರೆ. ಇದು ಆ ಪಕ್ಷ ಒಡೆದು ಚೂರು ಚೂರಾಗಿದೆ ಎಂಬುದನ್ನು ತೋರಿಸುತ್ತದೆ ಎಂದರು.
12 ಕೋಟಿಗೂ ಅಧಿಕ ಸದಸ್ಯರು ಬಿಜೆಪಿಯಲ್ಲಿದ್ದಾರೆ. ಪ್ರಾಮಾಣಿಕ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರಂತೆಯೇ, ದೇಶದ ಅಭ್ಯುದಯಕ್ಕಾಗಿ ದೇಶಭಕ್ತರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು ಎಂದು ಕರೆ ನೀಡಿದರು.
Get In Touch With Us info@kalpa.news Whatsapp: 9481252093
Discussion about this post