ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರಿಗೆ ಎರಡು ದಿನಗಳ ಹಿಂದೆ ಕೋವಿಡ್19 ಪರೀಕ್ಷೆ ಮಾಡಲಾಗಿದ್ದು, ಇಂದು ಪಾಸಿಟಿವ್ ರಿಪೋರ್ಟ್ ಬಂದಿದೆ.
ಈ ಹಿನ್ನೆಲೆಯಲ್ಲಿ ಅವರು ಇಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು, ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್, ಡಿ.ಕೆ. ಶಿವಕುಮಾರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆಘಾತವಾಗಿದೆ. ಅವರು ಶೀಘ್ರ ಸೋಂಕಿನಿಂದ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post