ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬೇಟೆಯಾಡಿದ್ದ ಚಿರತೆಯ ಚರ್ಮ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಚಿರತೆಯನ್ನು ಬೇಟೆಯಾಡಿ ಅದರ ಚರ್ಮವನ್ನು ಇಟ್ಟುಕೊಂಡಿದ್ದ ಭದ್ರಾವತಿ ತಾಲೂಕಿನ ದೊಡ್ಡೇರಿ ಬಾಳೆಕಟ್ಟೆ ಗ್ರಾಮದ ಆರೋಪಿ ಪ್ರೇಮನಾಥ(44) ಎನ್ನುವವನನ್ನು ಚನ್ನಗಿರಿ ಪೊಲೀಸ್ ಮತ್ತು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಬಂಧಿಸಿದ್ದಾರೆ.
ಬಂಧಿತನನ್ನು ಭದ್ರಾವತಿ ವಲಯಾರಣ್ಯಾಧಿಕಾರಿಗಳ ಸುಪರ್ದಿಗೆ ನೀಡಲಾಗಿದೆ. ಈ ಕುರಿತಂತೆ ಅರಣ್ಯ ಇಲಾಖಾಧಿಕಾರಿಗಳು ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Get In Touch With Us info@kalpa.news Whatsapp: 9481252093
















