ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಜೆ. ಅಪ್ಪಾಜಿ ಗೌಡ ವಿಧಿವಶರಾಗಿದ್ದಾರೆ.
ಇಂದು ಸಂಜೆ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತತಕ್ಷಣವೇ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ನೌಕರರಾಗಿದ್ದ ವೇಳೆ ಕಾರ್ಮಿಕ ಸಂಘಟನೆಯ ಮುಂದಾಳತ್ವ ವಹಿಸಿದ್ದ ಅಪ್ಪಾಜಿ ಗೌಡ ನಂತರ ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಿದರು.
1994ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭದ್ರಾವತಿಯ ಶಾಸಕರಾಗಿ ಆಯ್ಕೆಯಾದರು. ನಂತರ. 1999ರಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾದರು. 2013ರ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಗೆದ್ದ ಗೌಡರು 2018ರ ಚುನಾವಣೆಯಲ್ಲಿ ಸೋತಿದ್ದರು.
ಇದಾದ ನಂತರ ಪಕ್ಷದ ಸಂಘಟನೆ ಹಾಗೂ ಸರ್ಕಾರದ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿದ್ದರು. ತಮ್ಮ ಎದುರಾಳಿ ಹಾಗೂ ಹಾಲಿ ಶಾಸಕ ಕಾಂಗ್ರೆಸ್ ನ ಬಿ.ಕೆ.ಸಂಗಮೇಶ ವಿರುದ್ಧ ಸಮಯ ಸಿಕ್ಕಾಗಲೆಲ್ಲಾ ಹರಿಹಾಯುತ್ತಿದ್ದರು.
ಭದ್ರಾವತಿಯ ತಹಸೀಲ್ದಾರ್ ವಿರುದ್ಧ ಆಗಸ್ಟ್ 31 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದರಾದರೂ ನಂತರ ಅದು ರದ್ದಾಗಿತ್ತು. ಇದಾದ ನಂತರ ಗಂಟಲು ನೋವಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾಗಿತ್ತು. ಅದು ಬುಧವಾರ ಸಂಜೆಯ ನಂತರ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಗೌಡರು ಚಿಕಿತ್ಸೆ ಫಲಿಸದೆ ಮೃತಪಟ್ಟರು.
Get In Touch With Us info@kalpa.news Whatsapp: 9481252093
















