ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್’ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಇಂದು ಸಂಜೆ ಬಂಧಿಸಿದ್ದಾರೆ.
ಪ್ರಕರಣ ಕುರಿತಂತೆ ಇಂದು ಮುಂಜಾನೆ ಅವರನ್ನು ವಶಕ್ಕೆ ಪಡೆದು, ಸತತವಾಗಿ 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ ಸಿಸಿಬಿ ಅಧಿಕಾರಿಗಳು ಇಂದು ಸಂಜೆ ಅವರನ್ನು ಅಧಿಕೃತವಾಗಿ ಬಂಧಿಸಿದ್ದಾರೆ.
ಡ್ರಗ್ಸ್ ಸೇವನೆ ಮತ್ತು ಪೆಡ್ಲರ್’ಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಾಗಿಣಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಸಿಟಿ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ನಟಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 7ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ರಾಗಿಣಿಯನ್ನು ಬಂಧಿಸಿದ್ದಾರೆ.
Get In Touch With Us info@kalpa.news Whatsapp: 9481252093















