ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡ ಇಂದು ನಮ್ಮೊಂದಿಗಿಲ್ಲ. ಅವರನ್ನು ಕಳೆದುಕೊಂಡಿದ್ದೇವೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಕಂಬನಿ ಮಿಡಿದಿದ್ದಾರೆ.
ಉಂಬ್ಳೇಬೈಲ್ ರಸ್ತೆಯಲ್ಲಿರುವ ಅಪ್ಪಾಜಿ ಗೌಡರ ಮನೆಗೆ ಭೇಡಿ ನೀಡಿದ ಸಂಸದರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಭದ್ರಾವತಿ ರಾಜಕೀಯದಲ್ಲಿ ತಮ್ಮ ವ್ಯಕ್ತಿತ್ವದಿಂದಲೇ ಬೆಳೆದು ಮೂರು ಬಾರಿ ವಿಧಾನಸಭೆ ಪ್ರವೇಶಿಸಿದ ಅಪ್ಪಾಜಿಗೌಡರು, ನಮಗೆಲ್ಲಾ ಸ್ಪೂರ್ತಿಯಾಗಿದ್ದಾರೆ. ಹೋರಾಟಕ್ಕೆ ಮತ್ತೊಂದು ಹೆಸರು ಎಂಬಂತಿದ್ದ ಅವರನ್ನು ಕಳೆದುಕೊಂಡಿರುವುದು ಜಿಲ್ಲಾ ರಾಜಕೀಯದಲ್ಲಿ ಶೂನ್ಯ ಭಾವವನ್ನು ಸೃಷ್ಠಿಸಿದೆ ಎಂದು ದುಃಖ ವ್ಯಕ್ತಪಡಿಸಿದರು.
ಅಪ್ಪಾಜಿ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು, ಕುಟುಂಬಸ್ಥರೊಂದಿಗೆ ಮಾತನಾಡಿ, ನಿಮ್ಮ ಕುಟುಂಬದೊಂದಿದೆ ಎಂದಿಗೂ ನಾವಿದ್ದೇವೆ. ಧೈರ್ಯಗೆಡಬೇಡಿ ಎಂದು ಸಾಂತ್ವನ ಹೇಳಿದರು.
ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್ ಮುಖಂಡರಾದ ಎಸ್. ದತ್ತಾತ್ರಿ, ವಿ ಕದಿರೇಶ್, ಮಂಗೋಟೆ ರುದ್ರೇಶ್, ಜಿ.ಅನಂದ್ ಕುಮಾರ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ಪ್ರಭಾಕರ್ ಸಂತೋಷ್ ಬಳ್ಳೇಕೆರೆ, ಕಾಮತ್, ಸುನೀಲ್ ಗಾಯ್ಕವಾಡ್, ಮೋಹನ್, ಹನುಮಂತನಾಯ್ಕ ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
















