ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಭದ್ರಾ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದುಬರುತ್ತಿದೆ. ಒಳಹರಿವಿನ ಪ್ರಮಾಣವೂ ಸಹ ಹೆಚ್ಚಾಗಿದ್ದು, ಜಲಾಶಯ ಗರಿಷ್ಠ ನೀರಿನ ಮಟ್ಟ ಅತಿ ಶೀಘ್ರದಲ್ಲೇ ತಲುಪುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಯಾವುದೇ ಸಮಯದಲ್ಲಿ ಗೇಟ್ ಮೂಲಕ ನದಿಗೆ, ಭದ್ರಾ ಬಲದಂಡೆ ನಾಲೆ ಹಾಗೂ ಎಡದಂಡೆ ನಾಲೆಗಳಲ್ಲಿ ಹೆಚ್ಚುವರಿ ನೀರನ್ನು ಹರಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮಾಹಿತಿ ಬಿಡುಗಡೆಯಾಗಿದೆ.
ಪಕ್ಷ ಮಾಸ: ಪಿತೃ ಶ್ರಾದ್ಧಾ ಮಾಡಲು ಶಕ್ತಿಯಿಲ್ಲದವರು ಏನು ಮಾಡಬಹುದು? ಅಮಾವಾಸ್ಯೆಯಂದು ಪಿಂಡದಾನದ ವೈಜ್ಞಾನಿಕ ಹಿನ್ನೆಲೆಯೇನು?
ಜ್ಯೋತಿಷ್ಯ ಹಾಗೂ ಆಧ್ಯಾತ್ಮ ಕುರಿತಾಗಿನ ಎಲ್ಲ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ, ಕಾಲುವೆ ಹಾಗೂ ನದಿ ಪಾತ್ರದಲ್ಲಿ ಸಾರ್ವಜನಿಕರು, ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಹಾಗೂ ದೈನಂದಿನ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಇಂದು ಮುಂಜಾನೆಯ ಮಾಹಿತಿಯಂತೆ 186 ಅಡಿಗಳ ಪೂರ್ಣ ಮಟ್ಟದ ಜಲಾಶಯದಲ್ಲಿ 184.51 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಇದೇ ರೀತಿ ಮುಂದುವರೆದರೆ ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post