ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ.
ಈ ಕುರಿತಂತೆ ಭದ್ರಾ ಡ್ಯಾಂ ಅಥಾರಿಟಿ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಬೆಳಿಗ್ಗೆಯಿಂದ 10000 ಕ್ಯೂಸೆಕ್ಸ್ ನೀರನ್ನು ಕ್ರೆಸ್ಟ್ ಗೇಟ್‌ಗಳ ಮೂಲಕ ಬಿಡುಗಡೆ ಮಾಡಲಾಗಿದೆ.
ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಸಲಾಗಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೋರಲಾಗಿದೆ.
Get In Touch With Us info@kalpa.news Whatsapp: 9481252093

















