ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಭದ್ರಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕವಲಗುಂದಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಒಕ್ಕಲಿಗರ ಸಮುದಾಯ ಭವನದಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು, ಕವಲಗುಂದಿ ನಿವಾಸಿಗಳಲ್ಲಿ ಇಲ್ಲಿಗೆ ಸ್ಥಳಾಂತರ ಮಾಡಲಾಗಿದೆ.
ಉಕ್ಕಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ತೇಲಿ ಬರುತ್ತಿವೆ ಭಾರೀ ಗಾತ್ರದ ಮರದ ದಿಮ್ಮಿಗಳು
ಉಪವಿಭಾಗಾಧಿಕಾರಿ ಪ್ರಕಾಶ್, ನಗರಸಭೆ ಆಯುಕ್ತ ಮನೋಹರ್, ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಕವಲಗುಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿವಾಸಿಗಳನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿ, ನಿರಾಶ್ರಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದಾರೆ.
Get In Touch With Us info@kalpa.news Whatsapp: 9481252093






Discussion about this post