ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ತಾವರೆಚಟ್ನಹಳ್ಳಿ ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ 11 ಕೆ.ವಿ. ಮಾರ್ಗ ಮುಕ್ತತೆ ನೀಡುವ ಹಿನ್ನಲೆಯಲ್ಲಿ ಈ ಭಾಗದ ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಮೋಜಪ್ಪನಹೊಸೂರು, ಸುತ್ತಮುತ್ತಲಿನ ಜಲ್ಲಿಕ್ರಷರ್ಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. 24 ರಿಂದ 27 ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾನಿ ಗ್ರಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
Discussion about this post