ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ನಗರದಲ್ಲಿ ಬಹುತೇಕ ವಿಫಲವಾಗಿದ್ದು, ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇಂದು ಮಧ್ಯಾಹ್ನದ ವೇಳೆಯವರೆಗೂ ನಗರದ ಬಹುತೇಕ ಯಥಾಸ್ಥಿತಿಯಲ್ಲಿದ್ದು, ಬಹಳಷ್ಟು ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಇನ್ನು, ಸರ್ಕಾರಿ ಕಚೇರಿಗಳು, ಬ್ಯಾಂಕ್’ಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದರೆ, ಬಸ್, ಟ್ಯಾಕ್ಸಿ ಸಂಚಾರವೂ ಸಹ ಇತ್ತು. ಆದರೆ, ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್’ಗಳಲ್ಲಿ ಜನರ ಸಂಖ್ಯೆ ಕೊಂಚ ಕಡಿಮೆಯೇ ಇದ್ದರೆ, ಬಹಳಷ್ಟು ಹೊಟೇಲ್’ಗಳು ತೆರೆದಿರಲಿಲ್ಲ.
ವಾರ ಭವಿಷ್ಯ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 27.09.2020 ರಿಂದ 03.10.2020
ನಗರದಲ್ಲಿ ಜನರ ಹಾಗೂ ವಾಹನ, ಆಟೋ ಸಂಚಾರವೂ ಸಹ ಬಹುತೇಕ ಎಂದಿನಂತೆ ಇದ್ದು, ಇಂದಿನ ಬಂದ್ ನಗರದಲ್ಲಿ ವಿಫಲವಾಗಿದೆ ಎಂದೇ ಹೇಳಬಹುದು.
ಹಲವು ಸಂಘಟನೆಗಳ ಪ್ರತಿಭಟನೆ
ಇನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕರೆ ನೀಡಲಾಗಿದ್ದ ಬಂದ್ ಹಿನ್ನೆಲೆಯಲ್ಲಿ ಇದಕ್ಕೆ ಬೆಂಬಲಿಸಿದ್ದ ಹಲವು ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.
ಕಾಂಗ್ರೆಸ್, ಜೆಡಿಎಸ್, ಕರ್ನಾಟಕ ರಕ್ಷಣಾ ವೇದಿಕೆ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ತಾಲೂಕು ಬಂಜಾರ ಯುವಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿ, ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್, ಜೆಡಿಎಸ್ ಮತ್ತಿತರೆ ಸಂಘಟನೆಗಳ ನೇತೃತ್ವದಲ್ಲಿ ನಡೆಯಿತು
ಹುತ್ತಾ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಡಾ. ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಾಚಾರ್ ವೃತ್ತ ಹಾಗೂ ರಂಗಪ್ಪ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಕಚೇರಿ ಮುಂಭಾಗದವರೆಗೂ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಬಿ.ವಿ. ಗಿರೀಶ್, ಪ್ರಮುಖರಾದ ಹೇಮಂತರಾಜ್, ಸಂದೇಶ್ ಗೌಡ, ರಘು ಸಿದ್ದಾಪುರ, ವಿವೇಕ್, ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಬಿ.ಎಸ್. ರಾಜು, ಉಪಾಧ್ಯಕ್ಷ ಚಂದ್ರಶೇಖರ್, ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಗೌಡ, ದಲಿತ ಸಂಘರ್ಷ ಸಮಿತಿಯ ವೆಂಕಟೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post