ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ ಸ್ಥಾಪನೆಗೆ ಪ್ರಯತ್ನಗಳು ನಡೆದಿದ್ದು, ಈ ನಿಟ್ಟಿನಲ್ಲಿ ಹಿರಿಯ ವಿಜ್ಞಾನಿಗಳು ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಸಹ್ಯಾದ್ರಿ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಆರಂಭಿಸುವ ಬಗ್ಗೆ ರಕ್ಷಣಾ ಸಚಿವರು ಈಗಾಗಲೇ ಸಮ್ಮತಿ ಸೂಚಿಸಿದ್ದು, ಪ್ರಾಥಮಿಕ ಪ್ರಕ್ರಿಯೆಗಳು ಆರಂಭವಾಗಿದೆ.
ಈ ಸಂಬಂಧ ಉನ್ನತ ಮಟ್ಟದ ವಿಜ್ಞಾನಿಗಳನ್ನೊಳಗೊಂಡ ತಪಾಸಣಾ ತಂಡವು ಇಂದು ಕುವೆಂಪು ವಿಶ್ವವಿದ್ಯಾಲಯ/ಸಹ್ಯಾದ್ರಿ ಕಾಲೇಜಿಗೆ ಭೇಟಿ ನೀಡಿ, ಅಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದೆ. ಈ ಕುರಿತು ಮಂಜೂರಾತಿ ನೀಡುವ ಸಂಬಂಧ ಅಗತ್ಯ ಶಿಫಾರಸ್ಸನ್ನು ಮಾಡಲಿದೆ.
ಇನ್ನು, ಇದಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದ್ದು, ಇದರ ಯೋಜನಾ ವೆಚ್ಚ 30 ಕೋಟಿ ರೂ. ಅಂದಾಜಿಸಿದ್ದು, ಇದರ ಸಂಪೂರ್ಣ ಯೋಜನಾ ವೆಚ್ಚವನ್ನು ಕೇಂದ್ರ ಸರ್ಕಾರ ಒದಗಿಸಲಿದೆ.
ಸಂಶೋಧನಾ ಕೇಂದ್ರವು ಪ್ರಾರಂಭವಾಗುವುದರಿಂದ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ.
ಇನ್ನು, ಸಂಶೋಧನಾ ಕೇಂದ್ರ ಆರಂಭಕ್ಕೆ ಸಂಬಂಧಿಸಿದಂತೆ ಡಿಆರ್’ಡಿಒ ಅಧ್ಯಕ್ಷ ಡಾ.ಕೆ. ಪಾಠಕ್ ಸೇರಿದಂತೆ ಉನ್ನತ ಅಧಿಕಾರಿಗಳ ತಂಡದೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ವೀರಭದ್ರಪ್ಪ, ಕುಲಸಚಿವರಾದ ಡಾ. ಎಸ್.ಎಸ್. ಪಾಟೀಲ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮತ್ತಿತರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post