ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಆರ್’ಎಸ್’ಎಸ್ ಹಾಗೂ ವಿಎಚ್’ಪಿ ಮುಖಂಡರು ದೋಷಮುಕ್ತರಾದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಪಕ್ಷದ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಜೈ ಶ್ರೀರಾಮ್, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿ ಸಂಭ್ರಮಿಸಿಸಲಾಯಿತು.
ಸೂಡಾ ಮಾಜಿ ಅಧ್ಯಕ್ಷ ಎಸ್. ದತ್ತಾತ್ರಿ, ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಬಳ್ಳೇಕರೆ ಸಂತೋಷ್, ಜ್ಞಾನೇಶ್ವರ್, ಮೇಯರ್ ಸುವರ್ಣಾ ಶಂಕರ್, ಮಾಜಿ ನಗರಾಧ್ಯಕ್ಷ ನಾಗರಾಜ್ ಜಿಲ್ಲಾ ಖಜಾಂಚಿ ರಮೇಶ್, ನಗರ ಕಾರ್ಯದರ್ಶಿ ದೀನದಯಾಳು, ಯುವ ಮೋರ್ಚಾದ ಸುಹಾಸ್ ಶಾಸ್ತ್ರಿ ಸೇರಿದಂತೆ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post