No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯ ಬಹಳಷ್ಟು ಗ್ರಾಮಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ: ಡಿಸಿ ಶಿವಕುಮಾರ್

ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಮಾಹಿತಿ ನೀಡಲು ಸೂಚನೆ

kalpa News by kalpa News
October 6, 2020
in ಶಿವಮೊಗ್ಗ
0
ಜಿಲ್ಲೆಯ ಬಹಳಷ್ಟು ಗ್ರಾಮಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ: ಡಿಸಿ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಎಲ್ಲೆಡೆ ಪಸರಿಸುತ್ತಿರುವ ಕೊರೋನ ಸೋಂಕಿನ ನಿಯಂತ್ರಣದೊಂದಿಗೆ ವಿವಿಧ ಇಲಾಖೆಗಳ ಅನೇಕ ಯೋಜನೆಗಳ ಅನುಷ್ಠಾನ ಕಾರ್ಯ ನಿರಂತರವಾಗಿದ್ದರೂ ನಿರೀಕ್ಷಿತ ಪ್ರಗತಿ ಸಾಧಿಸುವುದು ಸಾಧ್ಯವಾಗಿಲ್ಲ. ಆದ್ದರಿಂದ ಮೊದಲಿನಂತೆ ಎಲ್ಲಾ ಯೋಜನೆಗಳ ಅನುಷ್ಠಾನ ಮತ್ತು ಅನುಪಾಲನಾ ಕಾರ್ಯ ಸಕ್ರಿಯವಾಗಿ, ನಿಗಧಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಲ್ಲಿ ಎಲ್ಲಾ ಇಲಾಖೆಗಳ ಕಂದಾಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳು ವಿಶೇಷ ಗಮನಹರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ಕಂದಾಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು.

ಜಿಲ್ಲೆಯ ಅನೇಕ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಲಾಗಿದ್ದು, ಮತ್ತೆ ಕೆಲವು ಪ್ರದೇಶಗಳಲ್ಲಿ ನಿವೇಶನದ ಸಮಸ್ಯೆಗಳಿರುವುದನ್ನು ಗಮನಿಸಲಾಗಿದೆ. ಈ ಸಂದರ್ಭದಲ್ಲಿ ನೆರೆಯ ಕೆಲವು ಗ್ರಾಮಗಳನ್ನು ಒಟ್ಟುಗೂಡಿಸಿಕೊಂಡು ಘಟಕಗಳನ್ನು ಸ್ಥಾಪಿಸುವ ಬಗ್ಗೆ ಮುಂದಿನ ಒಂದು ವಾರದೊಳಗಾಗಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸಲಹೆ ನೀಡಿದರು.

ಅಲ್ಲದೇ ಕೆಲವು ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇಲ್ಲದಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಅಂತಹ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಇದ್ದಲ್ಲಿ ಗುರುತಿಸುವುದು. ಅಥವಾ ಖಾಸಗಿ ವ್ಯಕ್ತಿಗಳು ಇಲಾಖೆಗೆ ಭೂಮಿ ಪರಭಾರೆ ಮಾಡುವವರಿದ್ದಲ್ಲಿಯೂ ವಿಚಾರಿಸಿ, ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕು. ಈ ಬಗ್ಗೆ ಎಲ್ಲಾ ತಹಶೀಲ್ದಾರರು ಗಮನಹರಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಸೋಂಕಿತರ ತಪಾಸಣೆ ಮತ್ತು ಚಿಕಿತ್ಸಾ ಕ್ರಮ ಅಡ್ಡಿ ಆತಂಕಗಳಿಲ್ಲದೆ ಮುಂದುವರೆಯುತ್ತಿರುವುದಕ್ಕೆ ಶ್ರಮಿಸುತ್ತಿರುವ ಸಂಬಂಧಿತ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಸಾರ್ವಜನಿಕರು ಸೋಂಕು ತಗುಲದಂತೆ ಸರ್ಕಾರ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ವಿಶೇಷವಾಗಿ ಮಾರುಕಟ್ಟೆಯಂತಹ ಪ್ರದೇಶದಲ್ಲಿ ಸೋಂಕಿತರು ತಮ್ಮ ವೈಯಕ್ತಿಕ ಅನುಕೂಲಕ್ಕಾಗಿ ಸೋಂಕು ಹರಡುವುದು ತರವಲ್ಲ. ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಅನಿವಾರ್ಯವಾಗಲಿದೆ ಎಂದರು.

ಕೋವಿಡ್‌ಗೆ ಸಂಬಂಧಿಸಿದಂತ ದೈನಂದಿನ ಮಾಹಿತಿಗಳನ್ನು ನಿಗಧಿತ ಆ್ಯಪ್‌ನಲ್ಲಿ ಅಪ್‌ಡೇಟ್ ಮಾಡುವಂತೆ ಹಾಗೂ ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರ ಭೇಟಿ ಕಾರ್ಯ, ಪ್ರಾಥಮಿಕ ಸಂಪರ್ಕ ಹೊಂದಿರುವವ ಮಾಹಿತಿ ಉನ್ನತೀಕರಿಸುವ ಕಾರ್ಯ ನಿರೀಕ್ಷೆಯಂತಾಗಿಲ್ಲ. ನಿಯೋಜಿತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ತ್ವರಿತಗತಿಯಲ್ಲಿ ಭೇಟಿ ಕಾರ್ಯ ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚಿಸಿದ ಅವರು, ಸಾರ್ವಜನಿಕರು ಮಾಸ್ಕ್‌ ಹಾಕದಿರುವವರಿಗೆ ದಂಡ ಹಾಕುವಲ್ಲಿ ಸ್ಥಳೀಯ ಸಂಸ್ಥೆಗಳು ಸಕ್ರಿಯವಾಗಿವೆ. ಈಗಾಗಲೆ ಕೊರೋನ ನಿಯಂತ್ರಣಕ್ಕಾಗಿ ಬಿಡುಗಡೆಯಾಗಿರುವ ಅನುದಾನ, ಬಳಕೆ, ಬೇಡಿಕೆ ಮುಂತಾದವುಗಳ ಬಗ್ಗೆ ಮಾಹಿತಿ ನೀಡುವಂತೆ ಅವರು ಸೂಚಿಸಿದರು.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತಹ ಮಾಹಿತಿಯನ್ನು ಕೂಡಲೇ ಗಣಕೀಕರಣಗೊಳಿಸಿ ಮಾಹಿತಿ ಒದಗಿಸುವಂತೆ ತಹಶೀಲ್ದಾರರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಾದ್ಯಂತ ಶೇ.88ರಷ್ಟು ಬೆಳೆ ಸಮೀಕ್ಷೆ ನಡೆದಿದೆ. ಕೃಷಿಮ ಇಲಾಖೆ ಅಧಿಕಾರಿಗಳು ರೈತರೊಂದಿಗೆ ಚರ್ಚೆ ನಡೆಸಿ ತ್ವರಿತಗತಿಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು. ತಹಶೀಲ್ದಾರರು ಈ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಿದರು.

ಕಳೆದೆರಡು ತಿಂಗಳಲ್ಲಿ ಆಗಿರುವ ಬೆಳೆ ನಷ್ಟದ ಕುರಿತು ಇಲಾಖೆಗಳು ನಿಗಧಿಪಡಿಸಿದ ದಿನಾಂಕದೊಳಗಾಗಿ ಬೆಳೆ ಪರಿಹಾರ ದಾಖಲೆಗಳನ್ನು ಒದಗಿಸುವಂತೆ ಹಾಗೂ ಕಳೆದ ಸಾಲಿನಲ್ಲಿ ಮಳೆಯಿಂದ ಮನೆ ಹಾನಿಗೊಳಗಾಗಿರುವ ಸಂತ್ರಸ್ಥರು ಮನೆ ಕಟ್ಟಿಕೊಳ್ಳುವ ಕಾರ್ಯ ಕೂಡಲೇ ಆರಂಭಿಸುವಂತೆ ನೋಟೀಸ್ ನೀಡಿ. ಪ್ರತಿಕ್ರಿಯಿಸದಿದ್ದಲ್ಲಿ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ತಾಲೂಕುಗಳ ಕಂದಾಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamogga NewsSolid Waste Disposal Unitಕೆ.ಬಿ. ಶಿವಕುಮಾರ್ಕೋವಿಡ್19ಘನತ್ಯಾಜ್ಯ ವಿಲೇವಾರಿ ಘಟಕಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶಕ್ಕೊಂದು ಕೊಡುಗೆಯಾಗಲಿದೆ ಜೆಎನ್‌ಎನ್‌ಸಿ ವಿದ್ಯಾರ್ಥಿಗಳ ನಾವಿನ್ಯಯುತ ಆವಿಷ್ಕಾರ

Next Post

ರೈತರನ್ನು ದೇವರೆಂದು ಪರಿಗಣಿಸಿ ಸಹಾಯ ಮಾಡಿ: ಆದಿಚುಂಚನಗಿರಿ ಶ್ರೀ

kalpa News

kalpa News

Next Post
ರೈತರನ್ನು ದೇವರೆಂದು ಪರಿಗಣಿಸಿ ಸಹಾಯ ಮಾಡಿ: ಆದಿಚುಂಚನಗಿರಿ ಶ್ರೀ

ರೈತರನ್ನು ದೇವರೆಂದು ಪರಿಗಣಿಸಿ ಸಹಾಯ ಮಾಡಿ: ಆದಿಚುಂಚನಗಿರಿ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL