ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ಎಚ್.ಜಿ. ಉಮಾಪತಿ(72) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.
ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ ಹಾಗು ಮೊಕ್ಕಳನ್ನು ಹೊಂದಿದ್ದರು.
ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಸಾಮಾನ್ಯ ಕಾರ್ಮಿಕನಾಗಿ ವೃತ್ತಿ ಆರಂಭಿಸಿದ ಉಮಾಪತಿಯವರು ಪೋರ್ಮನ್ ಆಗಿ ನಿವೃತ್ತಿ ಹೊಂದಿದ್ದರು. ಕಾರ್ಮಿಕ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಐಎಸ್‌ಎಲ್ ಕಾರ್ಖಾನೆಯನ್ನು ಉಕ್ಕು ಪ್ರಾಧಿಕಾರದ ಅಂಗ ಸಂಸ್ಥೆಯ ಅಧೀನಕ್ಕೆ ಸೇರ್ಪಡೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಮೂಲತಃ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿದ್ದ ಉಮಾಪತಿಯವರು ಹಲವು ಹುದ್ದೆಗಳನ್ನು ಸಹ ಅಲಂಕರಿಸಿದ್ದರು. ಅಲ್ಲದೆ ಸೇವಾದಳದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 2009ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ನಂತರ ಪುನಃ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದರು. ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಸದಸ್ಯರಾಗಿದ್ದರು. ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.
ಉಮಾಪತಿಯವರ ನಿಧನಕ್ಕೆ ಸೂಡಾ ಸದಸ್ಯ ರಾಮಲಿಂಗಯ್ಯ, ನಿವೃತ್ತ ಕಾರ್ಮಿಕರ ಸಂಘದ ನರಸಿಂಹಚಾರ್, ಹಿರಿಯ ಕಾಂಗ್ರೆಸ್ ಮುಖಂಡರು ಎಚ್.ಸಿ. ದಾಸೇಗೌಡ, ಮಾಜಿ ಉಪಮೇಯರ್ ಮಹಮ್ಮದ್ ಸನಾವುಲ್ಲಾ, ಕಸಾಪ ತಾಲೂಕು ಅಧ್ಯಕ್ಷ ಅಪೇಕ್ಷ ಮಂಜುನಾಥ್ ಸೇರಿದಂತೆ ಇನ್ನಿತರ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post