ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಸದಸ್ಯ, ಎಲ್’ಜಪಿ ಹಿರಿಯ ನಾಯಕ ರಾಮ್ ವಿಲಾಸ್ ಪಾಸ್ವಾನ್(74) ವಿಧಿವಶರಾಗಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪಾಸ್ವಾನ್ ಪುತ್ರ ಚಿರಾಗ್, ಪಾಸ್ವಾನ್ ಅವರು ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ, ಇಂದು ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಮುಖ್ಯಸ್ಥ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಎನ್’ಡಿಎ ಮೈತ್ರಿಕೂಟದಲ್ಲಿದ್ದ ಎಲ್’ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post