ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಬಾಲೇನಹಳ್ಳಿ ಗ್ರಾಮಗಳ ಬಳಿ ಘಟನೆ ನಡೆದಿದೆ. ಚಳ್ಳಕೆರೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಕಾರು ಹಿರಿಯೂರು ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡದಿದೆ.
ಕಾರು ಚಾಲಕ ಪ್ರಭಾಕರ್(38), ವೇಣು(20) ಹಾಗೂ ನಾಗವೇಣಿ(45) ಮೃತರು ಎಂದು ಗುರುತಿಸಲಾಗಿದ್ದು, ಎಲ್ಲರೂ ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದವರು ಎಂದು ವರದಿಯಾಗಿದೆ.
ಗಾಯಗೊಂಡಿರುವ ವಿಶಾಲಾಕ್ಷಮ್ಮ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post