ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹೊಸಮನೆ ಭೋವಿ ಕಾಲೋನಿ 6ನೆಯ ಕ್ರಾಸ್ ಭಾಗ್ಯ ಎಂಬುವವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.
ಇಂದು ಮುಂಜಾನೆ ಘಟನೆ ನಡೆದಿದ್ದು ಕೂಡಲೇ ಮನೆಯವರು ಬಟ್ಟೆಗಳನ್ನು ನೆನೆಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್ ನೇತೃತ್ವದಲ್ಲಿ ಪ್ರ.ಅ.ಶಾ ಅಶೋಕ್ ಕುಮಾರ್, ಚಾಲಕರುಗಳಾದ ಎಸ್.ಎಚ್. ಕುಮಾರ್, ಸುರೇಶಾಚಾರ್ ಮತ್ತು ಅ.ಶಾ. ಸಿಬ್ಬಂದಿ ಎಚ್.ಎಂ. ಹರೀಶ್ ಮತ್ತು ಕೆ.ಎಚ್. ರಾಜಾನಾಯ್ಕ್ ರವರುಗಳು ಕಾರ್ಯಾಚರಣೆ ನಡೆಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
 
	    	



 Loading ...
 Loading ... 
							



 
                
Discussion about this post