ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಕ್ಟೋಬರ್ 18ರಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.18ರಂದು ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 3.55 ಶಿಕಾರಿಪುರಕ್ಕೆ ಆಗಮಿಸಲಿರುವ ಅವರು ಅಂದು ವಾಸ್ತವ್ಯ ಮಾಡಲಿದ್ದಾರೆ.
ಅ.19ರಂದು ಬೆಳಗ್ಗೆ 11 ಗಂಟೆಗೆ ಕಸಬಾ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ, ಉಡುತಡಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದು, ಎಲ್ಲ ಕಾರ್ಯಕ್ರಮಗಳು ಶಿಕಾರಿಪುರ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ. ಅಂದು ಶಿಕಾರಿಪುರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಅ.20ರಂದು ಮುಂಜಾನೆ 10 ಗಂಟೆಗೆ ಸಾಂಸ್ಕೃತಿಕ ಭವನದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















