ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಿಎಂಟಿಸಿ ಬಸ್ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಸೂಜಿಮಲ್ಲೇಶ್ವರ ನಗರ ಸಮೀಪ ಬಳ್ಳಾರಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವದಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು ಬಿಎಂಟಿಸಿ ಬಸ್ ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಪ್ಪಳ ಜಿಲ್ಲೆಯ ಕೂಕನೂ ತಾಲೂಕಿನ ಆಡನೂರು ಗ್ರಾಮದ ಚಿದಾನಂದಪ್ಪ(35) ಎನ್ನುವವರು ಕೆಲಸಕ್ಕೆ ರಜೆ ಹಾಕಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಸೂಜಿಮಲ್ಲೇಶ್ವರ ನಗರದಲ್ಲಿ ಬಸ್ ಇಳಿದು ರಸ್ತೆ ದಾಟುವಾಗ ಅಪರಚಿತ ವಾಹನ ಡಿಕ್ಕಿಯಾದ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್’ಪಿ ಕೆ.ವಿ. ಶ್ರೀಧರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post