ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿರುವ ಶಿಲ್ಪ ಬೋರ್ಕರ್ (ಶಿಲ್ಪ ವಿನಾಯಕ ಕಾನಡೆ) ಅವರಿಗೆ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ನ್ಯೂಸ್ ಪೇಪರ್ ಅಸೋಸಿಯೇಶನ್ ಆಫ್ ಕರ್ನಾಟಕ ನೀಡುವ ಫ್ರೋರೆನ್ಸ್ ನೈಟಿಂಗೆಲ್ ಅವಾರ್ಡ್ 2020 ಸಂದಿದೆ.
ಪಟ್ಟಣದ ಸಾರ್ವಜನಿಕ ನರ್ಸಿಂಗ್ ಆಫೀಸರ್ ಆಗಿರುವ ಶಿಲ್ಪ ಬೋರ್ಕರ್ ಗುರುವಾರ ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ಪಡೆದಿದ್ದಾರೆ.
ತಾಲೂಕಿನ ಸರ್ಕಾರಿ ನೌಕರರಿಗೆ ದೊರೆತ ಈ ಗೌರವಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್. ತಾಲೂಕು ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗಪ್ಪ ಅರೆಹಳ್ಳಿ , ತಾಲೂಕು ವೈದ್ಯಾಧಿಕಾರಿ ಡಾ. ಅಕ್ಷತಾ, ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಶ್ವೇತಾ ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರು ಅಭಿನಂದಿಸಿದ್ದಾರೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post