ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ‘ಮನೆಮನೆಗೆ ಗಂಗೆ’ ಯೋಜನೆಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್’ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಪ್ರತಿಮನೆಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂಬುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗುರಿಗಳಲ್ಲಿ ಒಂದು. ಹೀಗಾಗಿ, ಕೇಂದ್ರದ ಸಹಯೋಗದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಿದ್ದು, ಮುಂದಿನ ಮೂರು ವರ್ಷದಲ್ಲಿ ಇದು ಕಾರ್ಯರೂಪಕ್ಕೆ ಬರಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post