ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನ ಬಿಆರ್’ಪಿ ಸಿಂಗನಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ’ಐಡಿಬಿ ಕಾಲೋನಿಯ ರಸ್ತೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ಕೆ’ಐಡಿಬಿ ಕಾಲೋನಿಯ ರಸ್ತೆ ನಿರ್ಮಾಣ ಹಾಗೂ ವಸತಿಗೃಹಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ(ಪಿಂಚಣಿ) ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರವನ್ನು ನೇರವಾಗಿ ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಸ್ವತಃ ತಾವೇ ಖುದ್ದಾಗಿ ಆಲಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಕಾರ್ಯೋನ್ಮುಖರಾಗುವಂತೆ ಸೂಚನೆ ನೀಡಿದರು.
ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿದ ಶಾಸಕರು, ನಗರ ಪ್ರದೇಶ ಮಾತ್ರವಲ್ಲ ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು, ಮೂಲಭೂತ ಸೌಕರ್ಯಗಳು ದೊರೆಯಬೇಕು ಎಂಬುದು ನಮ್ಮ ಉದ್ದೇಶ. ಇದಕ್ಕಾಗಿಯೇ ಕ್ಷೇತ್ರದ ಅಭಿವೃದ್ಧಿಗಾಗಿ ಬೃಹತ್ ಮೊತ್ತದ ಅನುದಾನವನ್ನು ತರಲಾಗಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ನಾವು ಸದಾ ಸಿದ್ದರಿದ್ದೇವೆ. ಕ್ಷೇತ್ರ ಅಭಿವೃದ್ಧಿಯ ಜೊತೆಗೆ ನಾಗರಿಕರ ಹಿತ, ಶಾಂತಿ ಹಾಗೂ ಸೌಹಾರ್ದತೆ ನಮ್ಮ ಆದ್ಯತೆ ಎಂದರು.
ಇನ್ನು, ಗೌಳಿಗರ ಬೀದಿಯಲ್ಲಿ ನಾಯ್ಡು ಸಮುದಾಯ ಭವನದ 25 ಲಕ್ಷ ರೂ. ವೆಚ್ಚದ ಮುಂದುವರೆದ ಕಾಮಗಾರಿಗೂ ಸಹ ಗುದ್ದಲಿ ಪೂಜೆಯನ್ನು ಶಾಸಕರು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ನಾಯ್ಡು ಸಮಾಜದ ಮುಖಂಡರು ಶಾಸಕರನ್ನು ಸನ್ಮಾನಿಸಿದರು.
ಬಾರಂದೂರು ಶ್ರೀ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ಸಮುದಾಯದ ಭವನದ 20 ಲಕ್ಷ ರೂ. ವೆಚ್ಚದ ಕಾಮಗಾರಿಗೂ ಸಹ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಬಾರಂದೂರು ಗ್ರಾಮಸ್ಥರು ಶ್ರೀ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯದ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post