ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿದ ಹಲವು ಜಿಲ್ಲೆಗಳು ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ಇಲಾಖೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಅಕ್ಟೋಬರ್ 23: ಕರಾವಳಿ ಕರ್ನಾಟಕ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ
ಅಕ್ಟೋಬರ್ 24: ಕರಾವಳಿ ಕರ್ನಾಟಕ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಅಕ್ಟೋಬರ್ 25: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಅಕ್ಟೋಬರ್ 26: ಕರಾವಳಿ ಕರ್ನಾಟಕ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಅಕ್ಟೋಬರ್ 27: ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡು ಭಾಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ.
ಇನ್ನು, ಶಿವಮೊಗ್ಗದ ಮಟ್ಟಿಗೆ ನೋಡುವುದಾದರೆ ಅ.25ನ್ನು ಹೊರತುಪಡಿಸಿ ಇಂದಿನಿಂದ 27ರವರೆಗೂ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















