ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಭದ್ರಾವತಿ ಗ್ರಾಮಾಂತರ ಸಿಪಿಐ ನೇತೃತ್ವದ ತಂಡವು ಯಶಸ್ವಿಯಾಗಿದ್ದು, ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಆರೋಪಿಗಳಾದ ಆಗರದಹಳ್ಳಿಯ ಶಶಿಕುಮಾರ್(26) ಹಾಗೂ ದೊಡ್ಡೇರಿ ಗ್ರಾಮದ ರವಿ(29) ಅವರುಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಒಟ್ಟು 56 ಗ್ರಾಂ ತೂಕದ ಬಂಗಾರದ ಆಭರಣಗಳು, ಅಂದಾಜು ಮೌಲ್ಯ ರೂ 2.30 ಲಕ್ಷ ಮತ್ತು 140 ಗ್ರಾಂ ತೂಕದ ಬೆಳ್ಳಿ ಆಭರಣಗಳು ಅಂದಾಜು ಮೌಲ್ಯ ರೂ 2 ಸಾವಿರ ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿ ಚಕ್ರ ವಾಹನ ವಶ ಪಡಿಸಿಕೊಳ್ಳಲಾಗಿದೆ.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಆರೋಪಿಗಳ ಪತ್ತೆಗಾಗಿ ಡಿವೈಎಸ್’ಪಿ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ, ಭದ್ರಾವತಿ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಮಂಜುನಾಥ್ ನೇತೃತ್ವದ ಹೊಳೆಹೊನ್ನೂರು ಸಿಪಿಐ ಸುರೇಶ್, ದೇವರಾಜ್ ಸೇರಿದಂತೆ ರಚಿಸಲಾಗಿದ್ದ ತಂಡ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















