ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್19 ಕಾರಣದಿಂದಾಗಿ ಸ್ಥಗಿತಗೊಂಡಿರುವ ತಾಳಗುಪ್ಪ ಬೆಂಗಳೂರು ರಾತ್ರಿ ರೈಲನ್ನು ಶೀಘ್ರ ಆರಂಭಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರಯತ್ನಗಳನ್ನು ನಡೆಸಿದ್ದಾರೆ.
ಈ ಕುರಿತಂತೆ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪ್ರಯತ್ನಗಳನ್ನು ಮಾಡುತ್ತಿರುವ ಸಂಸದರು, ತಾಳಗುಪ್ಪ-ಬೆಂಗಳೂರು ನಡುವಿನ 16627/16228 ಸಂಖ್ಯೆಯ ಎಕ್ಸ್’ಪ್ರೆಸ್ ರೈಲನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಶೀಘ್ರ ಮರು ಆರಂಭಿಸುವಂತೆ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post