ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನವರಾತ್ರಿಯ ಆಯುಧ ಪೂಜೆ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ನಿವಾಸದಲ್ಲಿ ಇಂದು ಸರಳವಾದರೂ ಸಂಪ್ರದಾಯಬದ್ದವಾಗಿ ಪೂಜೆ ಸಲ್ಲಿಸಲಾಯಿತು.
ಶಾಸಕರು ಹಾಗೂ ಅವರ ಕುಟುಂಬಸ್ಥರ ವಾಹನಗಳಿಗೆ ಸಂಪ್ರದಾಯ ಬದ್ದವಾಗಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಶಾಸಕರು, ಕ್ಷೇತ್ರದ ಮತದಾರ ಬಂಧುಗಳಿಗೆ ಆಯುಧ ಪೂಜೆ ಹಾಗೂ ವಿಜಯದಶಮಿಯ ಶುಭಾಷಯಗಳನ್ನು ಕೋರಿದರು.
ನಾಡಹಬ್ಬ ಎಲ್ಲೆಡೆ ಯಶಸ್ವಿಯಾಗಿ ನಡೆಯಲಿ, ಚಾಮುಂಡೇಶ್ವರಿ ತಾಯಿ ಎಲ್ಲರ ಕಷ್ಟಗಳನ್ನು, ಕೊರೋನಾ ಮಹಾಮಾರಿಯನ್ನು ದೂರ ಮಾಡಲಿ. ಭದ್ರಾವತಿಯ ಜನರ ಆಶೋತ್ತರಗಳು ಈಡೇರಲಿ ಎಂದರು.
ಕೊರೋನಾ ಸಂಕಷ್ಟದ ಸಮಯದಲ್ಲಿ ಜನರಿಗೆ ಸಹಾಯ ಮಾಡಿದ ಎಲ್ಲ ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ನನ್ನ ಕೃತಜ್ಞತೆಗಳು. ಅಂದು ಸಂಕಷ್ಟದಲ್ಲಿದ್ದ ಜನರ ನೆರವಿಗೆ ಧಾವಿಸುವ ಮೂಲಕ ಭದ್ರಾವತಿಯ ಜನತೆ ಹೃದಯ ಶ್ರೀಮಂತಿಕೆಯನ್ನು ಮೆರೆದಿದ್ದಾರೆ ಎಂದು ಶ್ಲಾಘಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post