ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21 ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್’ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಯನಗರ ಠಾಣಾ ವ್ಯಾಪ್ತಿಯ ತಿಲಕ್ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ ಮೊಬೈಲ್ ಆಂಗಡಿಯಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ದಾಖಲಿಸಿ, ಆರೋಪಿಗಳನ್ನು ಬಂಧಿಸಿದೆ.

ಬಂಧಿತರನ್ನು ರಾಗಿಗುಡ್ಡ ಶಾಂತಿ ನಗರದ ಅಜೇಯ(35), ಸಂದೀಪ್(28) ಗೋಪಾಳದ ಕಿರಣ್(32) ಎಂದು ಗುರುತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







