ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಸಂಪೂರ್ಣ ಪ್ರಕಟಗೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಧೂಳಿಪಟವಾಗಿದ್ದು, ಬಿಜೆಪಿ ಗೆಲುವಿನ ನಗೆ ಬೀರಿದೆ.
ರಾಜರಾಜೇಶ್ವರಿ ನಗರದಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 125665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 67993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಇನ್ನು, ಶಿರಾ ಕ್ಷೇತ್ರದಲ್ಲೂ ಇದೇ ಮೊದಲ ಬಾರಿಗೆ ಬಿಜೆಪಿಯ ಕಮಲ ಅರಳಿದ್ದು ಸಾಧಿಸಿದ್ದು, ರಾಜೇಶ್ ಗೌಡ ಗೆಲುವಿನ ನಗೆ ಬೀರಿದ್ದಾರೆ.
ಬಿಜೆಪಿಯ ರಾಜೇಶ್ ಗೌಡ 72,739 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ಮತ ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್‌ನ ಅಬ್ಬರದ ಪ್ರಚಾರ, ಆರೋಪ ಪ್ರತ್ಯಾರೋಪ, ಜಾತಿ ಕಣ್ಣೀರಿನ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ಆದರೆ, ಇಲ್ಲಿ ಕಾಂಗ್ರೆಸ್’ ಕಣ್ಣೀರು ಹಾಗೂ ಅನುಕಂಪದ ರಾಜಕಾರಣ ಕೈ ಕೊಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post