No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿಸೆಂಬರ್’ನಿಂದ ಶಾಲೆ ಆರಂಭ ಸಾಧ್ಯತೆ, ಶಿವಮೊಗ್ಗದ ಸರ್ಕಾರಿ ಶಾಲೆಗಳಲ್ಲಿ ಶೇ.98ರಷ್ಟು ದಾಖಲಾತಿ ಮುಕ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 10, 2020
in ಶಿವಮೊಗ್ಗ, Small Bytes
0
ಡಿಸೆಂಬರ್’ನಿಂದ ಶಾಲೆ ಆರಂಭ ಸಾಧ್ಯತೆ, ಶಿವಮೊಗ್ಗದ ಸರ್ಕಾರಿ ಶಾಲೆಗಳಲ್ಲಿ ಶೇ.98ರಷ್ಟು ದಾಖಲಾತಿ ಮುಕ್ತಾಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಡಿಸೆಂಬರ್’ನಿಂದ ಪ್ರೌಢಶಾಲೆ ಆರಂಭಿಸುವ ಸಾಧ್ಯತೆಯಿದ್ದು, ರಾಜ್ಯ ಸರ್ಕಾರ ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಜಿಲ್ಲಾ ಪಂಚಾಯ್ತಿಗೆ ಮಾಹಿತಿ ನೀಡಿದ್ದಾರೆ.

ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.

ಪ್ರೌಢಶಾಲೆ ಆರಂಭಿಸುವ ಕುರಿತಾಗಿ ವಿವಿಧ ಹಂತಗಳಲ್ಲಿ ಈಗಾಗಲೇ ಚರ್ಚೆ ನಡೆದಿದ್ದು, ಡಿಸೆಂಬರ್ ತಿಂಗಳಿನಿಅದ ತರಗತಿಗಳು ಆರಂಭವಾಗುವ ಸಾಧ್ಯತೆ ಇದೆ. ಸರ್ಕಾರ ಈ ಕುರಿತು ಮಾರ್ಗಸೂಚಿಯನ್ನು ಸಹ ಹೊರಡಿಸಿದೆ. ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಶೇ.98ರಷ್ಟು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ದಾಖಲಾತಿಯಲ್ಲಿ ಶೇ.100ರಷ್ಟು ಹೆಚ್ಚಳ ಉಂಟಾಗಿದೆ. ಪಠ್ಯಪುಸ್ತಕ ಪೂರ್ಣ ಪ್ರಮಾಣದಲ್ಲಿ ಸರಬರಾಜಾಗಿದೆ ಎಂದರು.


ಜಿಪಂ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಮಾತನಾಡಿ, ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ಈ ಸಾಲಿನಲ್ಲಿ 108ದಿನಗಳ ಅವಧಿಯ ಅಕ್ಕಿ ಮತ್ತು ಬೇಳೆಯನ್ನು ನೇರವಾಗಿ ವಿತರಿಸಲಾಗುವುದು ಎಂದು ತಿಳಿಸಿದರು.

ಪ್ರಸ್ತುತ 53ದಿನಗಳ ಅವಧಿಯ ರೇಶನ್ ಸರಬರಾಜಾಗಿದ್ದು, ತಲಾ ವಿದ್ಯಾರ್ಥಿಗೆ ಪ್ರತಿದಿನಕ್ಕೆ 100ಗ್ರಾಂ ಅಕ್ಕಿ ಮತ್ತು 37ಗ್ರಾಂ ಬೇಳೆಯಂತೆ ಒಂದೇ ಕಂತಿನಲ್ಲಿ ಇಂದಿನಿಅದ ವಿದ್ಯಾರ್ಥಿಗಳಿಗೆ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಟ್ಯಾಬ್ ವಿತರಣೆ
ಖಾಸಗಿ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗುವಂತೆ ಟ್ಯಾಬ್ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳಿಗೆ ತಲಾ ಒಂದು ಟ್ಯಾಬ್ ವಿತರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 4800 ಟ್ಯಾಬ್‌ಗಳನ್ನು ವಿತರಿಸಲಾಗುವುದು. ಸಿಲೆಬಸ್ ಬಳಿಕ ಟ್ಯಾಬ್ ಅನ್ನು ಮತ್ತೆ ಶಾಲೆಗೆ ವಿದ್ಯಾರ್ಥಿಗಳು ಹಿಂತಿರುಗಿಸಬೇಕಾಗುವುದು. ಜಿಲ್ಲೆಯಲ್ಲಿ ಶೇ.12ರಿಂದ 13ರಷ್ಟು ವಿದ್ಯಾರ್ಥಿಗಳ ಮನೆಯಲ್ಲಿ ಟಿವಿ ಇಲ್ಲದಿರುವುದು ಸಮೀಕ್ಷೆ ಮೂಲಕ ತಿಳಿದು ಬಂದಿದೆ ಎಂದರು.

ಕೋವಿಡ್ ನಿಯಂತ್ರಣ
ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಪ್ರಕರಣಗಳು ಇಳಿಮುಖವಾಗಿದ್ದು, ಒಟ್ಟು 20803 ಸೋಂಕಿತ ಪ್ರಕರಣಗಳ ಪೈಕಿ 20243 ಜನರು ಗುಣಮುಖರಾಗಿದ್ದಾರೆ. ಹಾಲಿ 213ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು 347ಮಂದಿ ಮರಣ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 3155 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದ್ದು, 152 ತೀವ್ರ ನಿಗಾ ಘಟಕದ ಬೆಡ್‌ಗಳು ಹಾಗೂ 658ಆಕ್ಸಿಜನ್ ಬೆಡ್‌ಗಳಿವೆ. 76 ವೆಂಟಿಲೇಟರ್‌ಗಳು ಲಭ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದರು.

ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದು, ಆಗಸ್ಟ್‌ ತಿಂಗಳಲ್ಲಿ ಶೇ.21, ಸೆಪ್ಟಂಬರ್‌ನಲ್ಲಿ ಶೇ.19 ಇದ್ದ ಸೋಂಕಿನ ಪ್ರಮಾಣ ಇಂದು ಶೇ.2ಕ್ಕೆ ಇಳಿದಿದೆ. ಪರೀಕ್ಷೆಗೆ ಒಳಪಡಿಸುವ 100 ಜನರಲ್ಲಿ 1.61 ಮಂದಿಗೆ ಸೋಂಕು ಕಂಡು ಬರುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಬೆಳೆ ವಿಮೆ ಮಂಜೂರು
2019ನೇ ಮುಂಗಾರು ಹಂಗಾಮಿಗೆ ಸಂಬಅಧಿಸಿದಅತೆ ಜಿಲ್ಲೆಯ 8950ರೈತರಿಗೆ ಬೆಳೆವಿಮೆ ಮಂಜೂರಾಗಿದ್ದು, ಒಟ್ಟು 8.56ಕೋಟಿ ರೂ. ಒಂದು ವಾರದ ಒಳಗಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 3796 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದ್ದು, ಪರಿಹಾರ ಒದಗಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದರು.

ಪ್ರಸಕ್ತ ಮುಂಗಾರಿನಲ್ಲಿ 234 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯುಂಟಾಗಿದೆ. ಕಳೆದ ಸಾಲಿಗೆ ಸಂಬಅಧಿಸಿದಅತೆ 21414 ರೈತರಿಗೆ 25.94ಕೋಟಿ ರೂ. ಬೆಳೆ ವಿಮೆ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ರಾಮಚಂದ್ರ ಮಡಿವಾಳ ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ವೀರಭದ್ರಪ್ಪ ಪೂಜಾರ್, ಸುರೇಶ್ ಸ್ವಾಮಿರಾವ್, ರೇಣುಕಾ ಹನುಮಂತಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsSchool RestartShimogaShivamoggaShivamogga NewsShivamogga ZPZilla Panchayatಕೃಷಿ ಇಲಾಖೆಶಿವಮೊಗ್ಗ
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ: ಬಿಜೆಪಿ ಭರ್ಜರಿ ಗೆಲುವು

Next Post

ಗಮನಿಸಿ! ನ.12ರಂದು ಭದ್ರಾವತಿ-ಮಸರಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಬಂದ್ ಆಗಿರುತ್ತದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಕಡದಕಟ್ಟೆ ರೈಲ್ವೆ ಮೇಲ್ಸೇತುವೆಗೆ ಸದ್ಯದಲ್ಲೇ ಟೆಂಡರ್, ಶೀಘ್ರ ಕಾಮಗಾರಿ ಆರಂಭ

ಗಮನಿಸಿ! ನ.12ರಂದು ಭದ್ರಾವತಿ-ಮಸರಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಬಂದ್ ಆಗಿರುತ್ತದೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL