ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಭದ್ರಾವತಿ-ಮಸರಹಳ್ಳಿ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕ ಪರಿಶೀಲನೆ ನಡೆಯುವ ಹಿನ್ನೆಲೆಯಲ್ಲಿ ನವೆಂಬರ್ 12ರ ನಾಳೆ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿರುತ್ತದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮಸರಹಳ್ಳಿ ಗೇಟ್ ನಂ.27ರಲ್ಲಿ ತಾಂತ್ರಿಕ ಪರಿಶೀಲನೆ ನಡೆಯುವ ಕಾರ್ಯವನ್ನು ರೈಲ್ವೆ ಇಲಾಖೆ ನಡೆಸಲಿದೆ. ಹೀಗಾಗಿ ನ.12ರ ನಾಳೆ ಬೆಳಗ್ಗೆ 8 ರಿಂದ ಸಂಜೆ 8ರವರೆಗೂ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಅಂದು ಎಲ್ಲ ವಾಹನಗಳು ಶಿವನಿ ಕ್ರಾಸ್, ಅಂತರಗಂಗೆ ಮೂಲಕ ಅಥವಾ ಬಾರಂದೂರು-ಹಳ್ಳಿಕೇರಿ ಮೂಲಕ ಸಂಚರಿಸಬಹುದಾಗಿದೆ ಎಂದು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post