ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸುವ ಸಂಭ್ರಮ ಜೊತೆಯಲ್ಲಿ ಸುರಕ್ಷತೆ ಕಡೆಗೂ ಹೆಚ್ಚಿನ ಗಮನ ಹರಿಸಿ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಸಲಹೆ ನೀಡಿದ್ದಾರೆ.

ದೀಪಾವಳಿ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಗೆ ಶುಭಾಷಯ ಕೋರಿ ಮಾತನಾಡಿರುವ ಅವರು, ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಎಲ್ಲ ಸಮಸ್ಯೆಗಳು ದೂರವಾಗಿ ಬೆಳಕಿನ ಹಬ್ಬ ಎಲ್ಲ ಬಾಳಿನಲ್ಲಿ ಹೊಸ ಜ್ಯೋತಿಯನ್ನು ಬೆಳಗಿಸಲಿ ಎಂದು ಹಾರೈಸಿದ್ದಾರೆ.
ದೀಪಾವಳಿಯನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಕರೆ ನೀಡಿರುವ ಅವರು, ಸರ್ಕಾರದ ಮಾರ್ಗಸೂಚಿಯಂತೆ ಹಸಿರು ಪಟಾಕಿಯನ್ನೇ ಸಿಡಿಸಿ. ಜೊತೆಯಲ್ಲಿ ಪಟಾಕಿ ಸಿಡಿಸುವ ವೇಳೆ ಹೆಚ್ಚಿನ ಜಾಗ್ರತೆಯಿರಲಿ. ಪ್ರಮುಖವಾಗಿ ಮಕ್ಕಳ ಬಗ್ಗೆ ಮುತುವರ್ಜಿ ವಹಿಸಿ ಎಂದು ಸಲಹೆ ನೀಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















